ನೆಲಮಂಗಲ : ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಕುಸುಮಾ (16) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ 6:30ರ ಸುಮಾರಿಗೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮೃತಳು ರಾಮು ಹಾಗೂ ಶೋಭಾ ದಂಪತಿಗಳ ಮಗಳು. ಕುಸುಮಾ ಪ್ರಸ್ತುತ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಘಟನೆಯ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕುಸುಮಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಶವಾಗಾರಕ್ಕೆ ರವಾನಿಸಲಾಗಿದೆ.








