ಬೆಂಗಳೂರು: ಹೋಲ್‌ಸೇಲ್ ಬೆಲೆಯಲ್ಲಿ ಚಿನ್ನ ಖರೀದಿಸುವುದಾಗಿ ನಂಬಿಸಿ ಸುಮಾರು 3 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪರೇಶ್ ಸೋನಿ ಎಂಬಾತ ತಾನು ಹೋಲ್‌ಸೇಲ್ ಚಿನ್ನದ ವ್ಯಾಪಾರಿ ಎಂದು ಪರಿಚಯಿಸಿಕೊಂಡು 3 ಕೆಜಿ ಚಿನ್ನದ ಆಭರಣ ಬೇಕೆಂದು ಅಂಗಡಿಗೆ ಕರೆ ಮಾಡಿದ್ದ. ಬಳಿಕ ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿರುವ ತನ್ನ ಕಚೇರಿಗೆ ಆಭರಣಗಳ ಸ್ಯಾಂಪಲ್ ತೆಗೆದುಕೊಂಡು ಬರುವಂತೆ ಸೂಚಿಸಿದ್ದ. ಅದರಂತೆ ಮಹೇಂದ್ರ ಕುಮಾರ್ ಜೈನ್ ಹಾಗೂ ಮತ್ತೊಬ್ಬ ಸಿಬ್ಬಂದಿ 3 ಕೆಜಿ ವಿವಿಧ ವಿನ್ಯಾಸದ ಚಿನ್ನಾಭರಣಗಳನ್ನು ತೆಗೆದುಕೊಂಡು ಆರೋಪಿಯ ಕಚೇರಿಗೆ ತೆರಳಿದ್ದರು.
ಈ ವೇಳೆ ಪರೇಶ್ ಸೋನಿಯು ಚಂದ್ರಶೇಖರ್ ಮತ್ತು ಶ್ಯಾಮ್ ಎಂಬುವವರನ್ನು ಮಹೇಂದ್ರ ಅವರಿಗೆ ಪರಿಚಯ ಮಾಡಿಸಿದ್ದ. ಡಿಸೈನ್ ನೋಡುವ ನೆಪದಲ್ಲಿ 1 ಕೆಜಿ 850 ಗ್ರಾಂ ತೂಕದ ಚಿನ್ನಾಭರಣಗಳನ್ನು ತೆಗೆದುಕೊಂಡ ಚಂದ್ರಶೇಖರ್ ರಾವ್ ಅಲ್ಲಿಂದ ಪರಾರಿಯಾಗಿದ್ದಾನೆ. ಚಂದ್ರಶೇಖರ್‌ನನ್ನು ಹುಡುಕುವುದಾಗಿ ಹೇಳಿ ಜೊತೆಗಿದ್ದ ಇನ್ನಿಬ್ಬರು ಆರೋಪಿಗಳು ಕೂಡ ಪರಾರಿ ಆಗಿದ್ದಾರೆ.ಇದನ್ನು ಓದಿ –ವೈಮಾನಿಕ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ:ಎಂ.ಬಿ. ಪಾಟೀಲ್
ಕಳವಾಗಿರುವ ಚಿನ್ನಾಭರಣಗಳ ಮೌಲ್ಯ ಅಂದಾಜು 3 ಕೋಟಿ ರೂ. ಎಂದು ಹೇಳಲಾಗಿದೆ. ಆರೋಪಿಗಳು ಪೂರ್ವಯೋಜಿತವಾಗಿ ಮೋಸ ಮಾಡಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬAಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಮೂವರ ಎಫ್‌ಐಆರ್ ದಾಖಲಾಗಿದೆ.








