ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ಸೋಮವಾರ ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನೆರವೇರಿತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ಅವರು 19 ಶಾಸಕರಿಗೆ ಗೋಪ್ಯತೆ ಮತ್ತು ಹುದ್ದೆಯ ಪ್ರಮಾಣವಚನ ಬೋಧಿಸಿದರು.
ಸಚಿವರಾಗಿ ಪಿ.ಎಂ. ನರೇಂದ್ರಸ್ವಾಮಿ, ಶಿವರಾಜ ತಂಗಡಗಿ, ರುದ್ರಪ್ಪ ಲಮಾಣಿ, ಕೆ.ಎಸ್. ಬಸವಂತಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ.ಝಡ್. ಜಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟರಂಗಶೆಟ್ಟಿ, ಎಸ್.ಎಸ್. ಮಲ್ಲಿಕಾರ್ಜುನ್, ಡಾ. ಅಜಯ್ ಸಿಂಗ್, ಎನ್. ಚಲುವರಾಯಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಎಚ್.ಸಿ. ಬಾಲಕೃಷ್ಣ, ಬಸವರಾಜ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಹಾಗೂ ಲಕ್ಷ್ಮಣ ಸವದಿ ಪ್ರಮಾಣವಚನ ಸ್ವೀಕರಿಸಿದರು.
Contents
ಯಾರು ಯಾವ ಹೆಸರಿನಲ್ಲಿ ಪ್ರಮಾಣ ಮಾಡಿದರು?
- ಪಿ.ಎಂ. ನರೇಂದ್ರಸ್ವಾಮಿ – ಡಾ. ಬಾಬಾಸಾಹೇಬ್ ಅಂಬೇಡ್ಕರ್, ಗಂಗಾದರ ಅಜ್ಜಯ್ಯ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಶಿವರಾಜ ತಂಗಡಗಿ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿದರು.
- ರುದ್ರಪ್ಪ ಲಮಾಣಿ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಕೆ.ಎಸ್. ಬಸವಂತಪ್ಪ – ಬಸವೇಶ್ವರರು ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಬಿ. ನಾಗೇಂದ್ರ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಟಿ. ರಘುಮೂರ್ತಿ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಬಿ.ಝಡ್. ಜಮೀರ್ ಅಹಮದ್ ಖಾನ್ – ಅಲ್ಲಾ ಹಾಗೂ ತಮ್ಮ ತಾಯಿಯ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ರಿಜ್ವಾನ್ ಅರ್ಷದ್ – ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣವಚನ ಸ್ವೀಕರಿಸಿದರು.
- ಸಂತೋಷ್ ಲಾಡ್ – ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣವಚನ ಸ್ವೀಕರಿಸಿದರು.
- ಮಧು ಬಂಗಾರಪ್ಪ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಪುಟ್ಟರಂಗಶೆಟ್ಟಿ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಎಸ್.ಎಸ್. ಮಲ್ಲಿಕಾರ್ಜುನ್ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಡಾ. ಅಜಯ್ ಸಿಂಗ್ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಎನ್. ಚಲುವರಾಯಸ್ವಾಮಿ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಕೆ.ಎಂ. ಶಿವಲಿಂಗೇಗೌಡ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿದರು.
- ಎಚ್.ಸಿ. ಬಾಲಕೃಷ್ಣ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಬಸವರಾಜ ರಾಯರೆಡ್ಡಿ – ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿ ಪ್ರಮಾಣವಚನ ಸ್ವೀಕರಿಸಿದರು.
- ವಿಜಯಾನಂದ ಕಾಶಪ್ಪನವರ್ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
- ಲಕ್ಷ್ಮಣ ಸವದಿ – ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.
ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.








