ಹುಬ್ಬಳ್ಳಿ: 225 ವೈದ್ಯರ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಒಳಮೀಸಲಾತಿ ಅನ್ವಯ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 1,300 ಶುಶ್ರೂಷಕರ ನೇಮಕಕ್ಕೂ ಅವಕಾಶ ನೀಡಲಾಗಿದೆ ಎಂದು ಹೇಳಿದರು.
ತಾಲ್ಲೂಕು ಆಸ್ಪತ್ರೆಗಳು 24 ಗಂಟೆ ಕಾರ್ಯನಿರ್ವಹಿಸುವಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ, ಅವುಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ತಿಳಿಸಿದರು.ಇದನ್ನು ಓದಿ –ಸಚಿವ ಸುಧಾಕರ್ ಆರೋಗ್ಯದ ಬಗ್ಗೆ ಸತ್ಯಾಂಶ ತಿಳಿಸಿ: ಹೆಚ್.ಡಿ.ಕೆ ಆಗ್ರಹ
ಸರ್ಕಾರಿ ಆಸ್ಪತ್ರೆಗಳ ಬಳಿ ಇರುವ ಜೆನರಿಕ್ ಔಷಧ ಮಳಿಗೆಗಳನ್ನು ತೆರವುಗೊಳಿಸುವ ನಿರ್ಧಾರವನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಕ್ರಮವನ್ನು ಸರ್ಕಾರವೂ ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳಲಿದೆ ಎಂದು ಹೇಳಿದರು.








