ನವದೆಹಲಿ: ಪಾಕಿಸ್ತಾನದಿಂದ ನಡೆದ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಭಾರತ ತನ್ನ ‘ಆಪರೇಷನ್ ಸಿಂಧೂರ’ (Operation Sindoor) ಅನ್ನು ಇನ್ನಷ್ಟು ತೀವ್ರಗೊಳಿಸಿದೆ. ಈ ಕಾರ್ಯಾಚರಣೆ ಅಂಗವಾಗಿ ಭಾರತವು ಪಾಕಿಸ್ತಾನದ ವಿರುದ್ಧ ಮಿಸೈಲ್ ದಾಳಿಗಳನ್ನು ನಡೆಸಿದ್ದು, ಇದರಿಂದ ಉಭಯ ರಾಷ್ಟ್ರಗಳ ನಡುವೆ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಭಾರತವು ದೇಶಾದ್ಯಂತ 24 ಪ್ರಮುಖ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ವರದಿಗಳಲ್ಲಿ ತಿಳಿದುಬಂದಿದೆ. ಈ ನಿರ್ಧಾರ ಭದ್ರತಾ ಕ್ರಮವಾಗಿ ತೆಗೆದುಕೊಳ್ಳಲಾಗಿದೆ.
ವಿಮಾನಯಾನ ಸಂಸ್ಥೆಗಳು ಜನರಿಗೆ ಪ್ರಯಾಣದ ಬಗ್ಗೆ ಮುಂಚಿತ ಸೂಚನೆಗಳನ್ನು ನೀಡುತ್ತಿದ್ದು, ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಗಳನ್ನು ಪುನರ್‌ಅವಲೋಕನೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಜೊತೆಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.ಇದನ್ನು ಓದಿ –ಆಪರೇಷನ್ ಸಿಂಧೂರ ಯಶಸ್ವಿ: ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್‌ಮೈಂಡ್ ಅಬ್ದುಲ್ ರೌಫ್ ಅಜರ್ ದುರ್ಮರಣ
ದೆಹಲಿ ವಿಮಾನ ನಿಲ್ದಾಣದಲ್ಲಿ ಸಾಮಾನ್ಯ ಕಾರ್ಯಾಚರಣೆ ಮುಂದುವರಿಕೆ:
ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸಾಮಾನ್ಯ ರೀತಿಯಲ್ಲಿ ಸಾಗುತ್ತಿದೆ. ಆದರೆ ಭದ್ರತೆಯ ಮಟ್ಟವನ್ನು ಹೆಚ್ಚಿಸಲಾದ ಹಿನ್ನೆಲೆಯಲ್ಲಿ ಕೆಲವೊಂದು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ತಮ್ಮ ಹಾರಾಟದ ವಿವರಗಳನ್ನು ಏರ್‌ಲೈನ್ ಹಾಗೂ ವಿಮಾನ ನಿಲ್ದಾಣದ ವೆಬ್‌ಸೈಟ್ ಮೂಲಕ ಪರಿಶೀಲಿಸಿ ಮಾತ್ರ ವಿಮಾನ ನಿಲ್ದಾಣಕ್ಕೆ ಆಗಮಿಸುವಂತೆ ಸೂಚಿಸಲಾಗಿದೆ.