By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಇರಾನ್ ಜತೆ ವ್ಯವಹಾರ ನಡೆಸುವ ದೇಶಗಳಿಗೆ ಶೇ.25 ಸುಂಕ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Latest News > ಇರಾನ್ ಜತೆ ವ್ಯವಹಾರ ನಡೆಸುವ ದೇಶಗಳಿಗೆ ಶೇ.25 ಸುಂಕ
Latest News

ಇರಾನ್ ಜತೆ ವ್ಯವಹಾರ ನಡೆಸುವ ದೇಶಗಳಿಗೆ ಶೇ.25 ಸುಂಕ

Team Varthaman
Last updated: January 13, 2026 12:33 PM
Team Varthaman
Published: January 13, 2026
Share
SHARE
  • ಟ್ರಂಪ್ ಘೋಷಣೆ, ಭಾರತಕ್ಕೂ ಆತಂಕ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನೊಂದಿಗೆ ವ್ಯಾಪಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸುವ ಮಹತ್ವದ ನಿರ್ಧಾರವನ್ನು ಘೋಷಿಸಿದ್ದಾರೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಯಾವುದೇ ತಿದ್ದುಪಡಿ ಇರುವುದಿಲ್ಲ ಎಂದು ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರುತ್ ಸೋಶಿಯಲ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ನಿರ್ಧಾರವು ಭಾರತ ಸೇರಿದಂತೆ ಹಲವಾರು ದೇಶಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಭಾರತ ಮತ್ತು ಇರಾನ್ ನಡುವೆ ದೀರ್ಘಕಾಲದ ವ್ಯಾಪಾರ ಸಂಬಂಧವಿದ್ದು, ಭಾರತವು ಇರಾನ್‌ನಿಂದ ಡ್ರೈಫ್ರೂಟ್ಸ್, ರಾಸಾಯನಿಕಗಳು ಮತ್ತು ಗಾಜಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತದೆ. ಅದೇ ವೇಳೆ ಅಕ್ಕಿ, ಚಹಾ, ಸಕ್ಕರೆ, ಔಷಧಗಳು, ಯಂತ್ರೋಪಕರಣಗಳು ಸೇರಿದಂತೆ ಹಲವು ವಸ್ತುಗಳನ್ನು ಭಾರತವು ಇರಾನ್‌ಗೆ ರಫ್ತು ಮಾಡುತ್ತಿದೆ.

Join WhatsApp Group

ವಿದೇಶಾಂಗ ಸಚಿವಾಲಯದ ಮಾಹಿತಿ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಭಾರತ ಇರಾನ್‌ನ ಪ್ರಮುಖ ವ್ಯಾಪಾರ ಪಾಲುದಾರರಲ್ಲೊಂದು. ಈಗಾಗಲೇ ಭಾರತವು ಅಮೆರಿಕದಿಂದ ಶೇ.50ರಷ್ಟು ಸುಂಕವನ್ನು ಎದುರಿಸುತ್ತಿದ್ದು, ಇದರಲ್ಲಿ ಶೇ.25ರಷ್ಟು ರಷ್ಯಾದಿಂದ ತೈಲ ಖರೀದಿಗೆ ಸಂಬಂಧಿಸಿದೆ. ರಷ್ಯಾದಿಂದ ತೈಲ ಖರೀದಿಸುವುದರಿಂದ ಉಕ್ರೇನ್ ಯುದ್ಧದಲ್ಲಿ ರಷ್ಯಾಗೆ ಪರೋಕ್ಷ ಬೆಂಬಲ ಸಿಗುತ್ತದೆ ಎಂಬುದು ಅಮೆರಿಕದ ವಾದವಾಗಿದೆ.

ಟ್ರಂಪ್ ಅವರ ನಿರ್ಧಾರವನ್ನು ಕೆಲ ಅಮೆರಿಕ ನಾಯಕರು ಶ್ಲಾಘಿಸಿದ್ದಾರೆ. ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ, ಈ ಕ್ರಮವು ಇರಾನ್ ಸರ್ಕಾರವನ್ನು ಆರ್ಥಿಕವಾಗಿ ಪ್ರತ್ಯೇಕಿಸುವ ಬಲವಾದ ನಾಯಕತ್ವದ ಸೂಚನೆ ಎಂದು ಹೇಳಿದ್ದಾರೆ.

ಇರಾನ್‌ನೊಳಗಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಹಣದುಬ್ಬರ, ಆರ್ಥಿಕ ಸಂಕಷ್ಟ ಮತ್ತು ಆಡಳಿತದ ವಿರುದ್ಧದ ಅಸಮಾಧಾನದಿಂದಾಗಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ವರದಿಗಳ ಪ್ರಕಾರ, ಇದುವರೆಗೆ 544 ಮಂದಿ ಸಾವನ್ನಪ್ಪಿದ್ದು, 10 ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಇದೇ ವೇಳೆ, ಇರಾನ್ ಮಾತುಕತೆಗೆ ಅಮೆರಿಕವನ್ನು ಸಂಪರ್ಕಿಸಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಇರಾನ್ ನಾಯಕರು ಸಂವಾದಕ್ಕೆ ಸಿದ್ಧರಾಗಿದ್ದಾರೆ ಎಂದು ಹೇಳಿದ ಅವರು, ಸಭೆಗೆ ಸಿದ್ಧತೆಗಳು ನಡೆಯುತ್ತಿವೆ ಎಂದಿದ್ದಾರೆ. ಆದರೆ, ದೇಶದೊಳಗಿನ ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ, ಮಾತುಕತೆ ಆರಂಭಕ್ಕೂ ಮುನ್ನ ಅಮೆರಿಕ ಕಠಿಣ ಕ್ರಮ ಕೈಗೊಳ್ಳಬೇಕಾಗಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕಳೆದ ಎರಡು ವಾರಗಳಿಗೂ ಹೆಚ್ಚು ಕಾಲ ಇರಾನ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿದ್ದು, ರಾಜಧಾನಿ ಟೆಹ್ರಾನ್ ಸೇರಿದಂತೆ ದೇಶಾದ್ಯಂತ ಸರ್ಕಾರದ ವಿರುದ್ಧ ಭಾರೀ ಪ್ರದರ್ಶನಗಳು ನಡೆದಿವೆ. ಈ ಬೆಳವಣಿಗೆಗಳು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ದೊಡ್ಡ ಸವಾಲಾಗಿ ಪರಿಣಮಿಸಿವೆ.ಇದನ್ನು ಓದಿ –ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಇವು ಬೇಕು

ಇರಾನ್ ಮೇಲೆ ಆರ್ಥಿಕ ಒತ್ತಡ ಹೇರಲು ಮಾತ್ರವಲ್ಲದೆ, ಅದರೊಂದಿಗೆ ವ್ಯಾಪಾರ ಸಂಬಂಧ ಮುಂದುವರಿಸುವ ದೇಶಗಳಿಗೆ ಎಚ್ಚರಿಕೆ ನೀಡುವ ಉದ್ದೇಶದಿಂದಲೇ ಈ ಸುಂಕ ವಿಧಿಸಲಾಗಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಇರಾನ್‌ನ ಪ್ರಮುಖ ವ್ಯಾಪಾರ ಪಾಲುದಾರರ ಪಟ್ಟಿಯಲ್ಲಿ ಭಾರತ, ಚೀನಾ, ಟರ್ಕಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಸೇರಿವೆ ಎಂದು ವರದಿಯಾಗಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
ಗುಪ್ತಚರ ಇಲಾಖೆ: 3717 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
KRS ಜಲಾಶಯಕ್ಕೆ ಸೋಮವಾರ ಬಾಗೀನ ಅರ್ಪಣೆ
ಗಣೇಶ ಮೆರವಣಿಗೆ ವೇಳೆ ಟ್ರಕ್ ನುಗ್ಗಿ 8 ಮಂದಿ ದುರಂತ ಸಾವು
ಮುಂದಿನ 6 ತಿಂಗಳಲ್ಲಿ ಪೆಟ್ರೋಲ್ ದರದಷ್ಟೇ ಇವಿ ಬೆಲೆ: ನಿತಿನ್ ಗಡ್ಕರಿ
TAGGED:25% tariffDonald TrumpIranlatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಕೋಮಲವಾದ ತ್ವಚೆಗೆ ಹಾಲಿನ ಕೆನೆ

Team Varthaman
Team Varthaman
January 17, 2026
20ಕ್ಕೂ ಅಧಿಕ ಕೋತಿಗಳು ವಿಷ ಸೇವಿಸಿ ಸಾವು
ರಸ್ತೆ ಅಗಲೀಕರಣ ನೆಪದಲ್ಲಿ ಮರಗಳ ಹನನಕ್ಕೆ ಖಂಡನೆ
ಕ್ಯಾಂಟರ್ ಡಿಕ್ಕಿ : ಒಂದೇ ಕುಟುಂಬದ ನಾಲ್ವರ ಧಾರುಣ ಸಾವು
ಪವಿತ್ರ ಪುರಿ: ಜಗತ್ತಿಗೆ ಜಗನ್ನಾಥನ ದರ್ಶನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?