ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಬಿಪಿಎಲ್ (BPL) ರೇಷನ್ ಕಾರ್ಡ್ ಪಡೆದು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದವರಿಗೆ ಇದೀಗ ದೊಡ್ಡ ಶಾಕ್ ಎದುರಾಗಿದೆ. ರಾಜ್ಯ ಸರ್ಕಾರವು ಇತ್ತೀಚೆಗೆ 4.9 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರಾಜ್ಯಾದ್ಯಂತ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಕೈಗೊಂಡ ಅಭಿಯಾನದಲ್ಲಿ ಕಳೆದ ಕೆಲವು ವಾರಗಳಲ್ಲಿ ಮಾತ್ರವೇ 2 ಲಕ್ಷಕ್ಕೂ ಹೆಚ್ಚು ಅಕ್ರಮ ಕಾರ್ಡ್ಗಳನ್ನು ಪತ್ತೆಹಚ್ಚಲಾಗಿದೆ. ಇದರೊಂದಿಗೆ, ಒಟ್ಟು ರದ್ದಾದ ಬಿಪಿಎಲ್ ಕಾರ್ಡ್ಗಳ ಸಂಖ್ಯೆ ಈಗ 4.9 ಲಕ್ಷಕ್ಕೆ ತಲುಪಿದೆ.
ವಿಭಾಗದ ಅಧಿಕಾರಿಗಳ ಪ್ರಕಾರ, ಅನರ್ಹ ಫಲಾನುಭವಿಗಳು ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರದ ಸಬ್ಸಿಡಿ, ಧಾನ್ಯ, ಹಾಗೂ ಇತರೆ ಸೌಲಭ್ಯಗಳನ್ನು ಪಡೆಯುತ್ತಿದ್ದರೆಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.
ಈ ಹಿನ್ನೆಲೆಯಲ್ಲಿ, ಸರ್ಕಾರವು ಇಂತಹ ಫಲಾನುಭವಿಗಳಿಂದ ಬಿಪಿಎಲ್ ಕಾರ್ಡ್ಗಳನ್ನು ಹಿಂತೆಗೆದು ಅವರಿಗೆ ಎಪಿಎಲ್ ಕಾರ್ಡ್ಗಳನ್ನು ನೀಡುವ ಕ್ರಮವನ್ನು ಕೈಗೊಂಡಿದೆ. ಜೊತೆಗೆ, ಅಕ್ರಮವಾಗಿ ಯೋಜನೆಗಳ ಸದುಪಯೋಗ ಪಡೆದವರ ವಿರುದ್ಧ ದಂಡ ವಿಧಿಸುವ ಪ್ರಕ್ರಿಯೆಯನ್ನೂ ಆರಂಭಿಸಲು ಆಹಾರ ಇಲಾಖೆ ಸಿದ್ಧತೆ ನಡೆಸುತ್ತಿದೆ.
ದಂಡ ವಿಧಿಸುವ ಮೊತ್ತ ಹಾಗೂ ಕ್ರಮದ ಬಗ್ಗೆ ಅಂತಿಮ ನಿರ್ಧಾರ ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಇಲಾಖೆ ಮೂಲಗಳು ತಿಳಿಸಿವೆ.ಇದನ್ನು ಓದಿ –ದೀಪಾವಳಿಗೆ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ!
ಈ ಕ್ರಮದಿಂದ ಅಕ್ರಮ ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಕಾನೂನು ಬಲದಿಂದ ಪಾಠ ಕಲಿಸಲು ಸರ್ಕಾರ ಬದ್ಧವಾಗಿದೆ.








