ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬ ಅಭ್ಯರ್ಥಿ ಕರ್ನಾಟಕದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿಖಾನ್ ಹಾಗೂ ಪಕ್ಷದ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ನಾಗರಾಜ ಅವರು ರಾಜ್ಯಸಭೆ ಪ್ರವೇಶಿಸಿದ್ದಾರೆ.
ರಾಜ್ಯಸಭೆಯ ಹಾಲಿ ಸದಸ್ಯರಾಗಿರುವ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಸದಸ್ಯರಾದ ಈರಣ್ಣ ಕಡಾಡಿ ಮತ್ತು ನಾರಾಯಣ ಕೊರಗಪ್ಪ, ಜೆಡಿಎಸ್‌ನ ಎಚ್.ಡಿ. ದೇವೇಗೌಡ ಅವರ ಅವಧಿ ಜೂನ್ 25ರಂದು ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿತ್ತು.
ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಐವರು ಅಭ್ಯರ್ಥಿಗಳು ಸ್ಪರ್ಧೆಗೆ ಮುಂದಾಗಿದ್ದರು. ಆದರೆ ನಾಮಪತ್ರಗಳ ಪರಿಶೀಲನೆ ವೇಳೆ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಇದನ್ನು ಓದಿ –ಕೆಐಎ: 1.37 ಕೋಟಿ ಚಿನ್ನ ,ಗಾಂಜಾ ಜಪ್ತಿ
ನಾಮಪತ್ರ ಹಿಂಪಡೆಯಲು ಗುರುವಾರ ಕೊನೆಯ ದಿನವಾಗಿದ್ದು, ಕಣದಲ್ಲಿ ನಾಲ್ವರು ಅಭ್ಯರ್ಥಿಗಳು ಮಾತ್ರ ಉಳಿದಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆಯಾದವರು ಎಂದು ಘೋಷಿಸಲಾಗಿದೆ.








