ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕನಸಿನ ಯೋಜನೆಯಾದ “ಕಾವೇರಿ ಆರತಿ” ಗೆ ಇಂದು (ಸೆಪ್ಟೆಂಬರ್ 26) ಅದ್ದೂರಿ ಚಾಲನೆ ದೊರಕಲಿದೆ.
ಐದು ದಿನಗಳ ಕಾಲ ನಡೆಯಲಿರುವ ಈ ವಿಶೇಷ ಧಾರ್ಮಿಕ–ಸಾಂಸ್ಕೃತಿಕ ಕಾರ್ಯಕ್ರಮ ಕೆಆರ್‌ಎಸ್ ಜಲಾಶಯದಲ್ಲಿ ಭವ್ಯವಾಗಿ ಜರುಗಲಿದೆ.
ಬೋಟಿಂಗ್ ಪಾಯಿಂಟ್‌ನಲ್ಲಿ ಸಂಜೆ 6 ಗಂಟೆಗೆ ಡಿ.ಕೆ. ಶಿವಕುಮಾರ್ ಕಾವೇರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗಂಗಾರತಿ ಶೈಲಿಯನ್ನು ಹೋಲುವ ರೀತಿಯಲ್ಲಿ 12-13 ಮಂದಿ ಸ್ಥಳೀಯ ಪುರೋಹಿತರು ವಿಶೇಷ ತರಬೇತಿ ಪಡೆದು ಆರತಿ ನೆರವೇರಿಸಲಿದ್ದಾರೆ.
ಈ ಆರತಿಯನ್ನು ವೀಕ್ಷಿಸಲು ರಾಜ್ಯ ಹಾಗೂ ಹೊರರಾಜ್ಯಗಳಿಂದ ಸುಮಾರು 8 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸುವ ನಿರೀಕ್ಷೆ ವ್ಯಕ್ತವಾಗಿದ್ದು ,ಪ್ರವಾಸಿಗರಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಪ್ರಸಾದವಾಗಿ ಲಾಡು ವಿತರಣೆ ಮಾಡುವ ವ್ಯವಸ್ಥೆಯನ್ನೂ ಮಾಡಲಾಗಿದೆ.ಇದನ್ನು ಓದಿ –ಏಷ್ಯಾ ಕಪ್ ಇತಿಹಾಸದಲ್ಲಿ ಮೊದಲ ಇಂಡೋ–ಪಾಕ್ ಫೈನಲ್
ಕಾವೇರಿ ಆರತಿ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಬೃಹತ್ ಸೌಲಭ್ಯ ಕಲ್ಪಿಸಲಾಗಿದೆ. ಈ ಐದು ದಿನಗಳ ಕಾಲ ಕೆಆರ್‌ಎಸ್ ಬೃಂದಾವನಕ್ಕೆ ಉಚಿತ ಪ್ರವೇಶ ನೀಡಲಾಗಿದ್ದು, ಟಿಕೆಟ್ ಹಾಗೂ ಟೋಲ್ ಸಂಗ್ರಹವನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ.








