ಮಂಡ್ಯ: ಮನೆದಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು 5 ವರ್ಷದ ಬಾಲಕ ಮೃತಪಟ್ಟು ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನಲ್ಲಿ ನಡೆದಿದೆ.
ಮೃತ ಬಾಲಕನನ್ನು ಸಂಜೀವ್ (5) ಎಂದು ಗುರುತಿಸಲಾಗಿದೆ. ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾಗ ಅವಿತುಕೊಳ್ಳಲು ಸಂಜೀವ್ ಬಾಗಿಲು ತೆಗೆಯುತ್ತಿದ್ದ ಸಂದರ್ಭದಲ್ಲಿ ಬಾಗಿಲಿಗೆ ವಿದ್ಯುತ್ ಹರಿದು ಇದ್ದುದರಿಂದ ಶಾಕ್ ಹೊಡೆದು ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ.
ಬಾಲಕನನ್ನು ರಕ್ಷಿಸಲು ಹೋಗಿದ್ದ ತಾಯಿಗೂ ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯವಾಗಿದೆ. ತಕ್ಷಣವೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ. ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇದನ್ನು ಓದಿ –ಮುಟ್ಟಿನ ಮೂಢನಂಬಿಕೆಗೆ ಪೂರ್ಣವಿರಾಮ
ಈ ದುರ್ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.