ಬೆಂಗಳೂರು: ಸ್ನೇಹಿತನ ಬ್ಯಾಂಕ್ ಖಾತೆಯನ್ನು ದುರುಪಯೋಗಪಡಿಸಿಕೊಂಡು 7 ಕೋಟಿ ರೂ. ಹಣ ವರ್ಗಾವಣೆ ಮಾಡಿರುವ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.
ಆಯುಷ್ ಹಾಗೂ ಇತರರು ಸೇರಿ ವಿದ್ಯಾರ್ಥಿಯೊಬ್ಬನನ್ನು ವಂಚಿಸಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಒಂದು ವರ್ಷದಿಂದ ಸ್ನೇಹಿತರಾಗಿದ್ದ ಆಯುಷ್, ತನ್ನ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂದು ಹೇಳಿ ವಿದ್ಯಾರ್ಥಿಯಿಂದ ಖಾತೆ ವಿವರಗಳನ್ನು ಪಡೆದಿದ್ದಾನೆ. ನಂಬಿಕೆ ಇಟ್ಟು ವಿದ್ಯಾರ್ಥಿ ತನ್ನ ಪಾಸ್‌ಬುಕ್, ಎಟಿಎಂ ಕಾರ್ಡ್ ಹಾಗೂ ಮೊಬೈಲ್ ಸಿಮ್ ನೀಡಿದ್ದಾನೆ.
ನಂತರ ಬ್ಯಾಂಕ್ ಅಧಿಕಾರಿಗಳು ವಿದ್ಯಾರ್ಥಿಯನ್ನು ಸಂಪರ್ಕಿಸಿ, ನಿಮ್ಮ ಖಾತೆ ಮೂಲಕ ಸೈಬರ್ ವಂಚನೆ ನಡೆದಿದ್ದು 7 ಕೋಟಿ ರೂ. ವರ್ಗಾವಣೆಯಾಗಿದೆ ಎಂದು ತಿಳಿಸಿದ್ದಾರೆ. ತಕ್ಷಣವೇ ವಿದ್ಯಾರ್ಥಿಯ ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡಲಾಗಿದೆ.ಇದನ್ನು ಓದಿ –ರಾಜ್ಯದಲ್ಲಿ ಅಧಿಕ ತಾಪಮಾನ ಎಚ್ಚರಿಕೆ – ಬೇಸಿಗೆಯಲ್ಲಿ ಬಿಸಿಲು ತೀವ್ರ
ಈ ಕುರಿತು ವಿದ್ಯಾರ್ಥಿ ಉತ್ತರ ವಿಭಾಗ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.








