By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿ
BengaluruEducationKarnataka

ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿ

Team Varthaman
Last updated: April 28, 2026 11:25 AM
Team Varthaman
Published: April 28, 2026
Share
SHARE

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಟು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ.

ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳನ್ನು ಬಲಪಡಿಸುವ ಉದ್ದೇಶದಿಂದ ಈ ಸಮಗ್ರ ಯೋಜನೆ ರೂಪಿಸಲಾಗಿದೆ.

ಈ ಯೋಜನೆಯಡಿ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆಯನ್ನು ತ್ವರಿತ ನೇಮಕಾತಿ ಮೂಲಕ ನಿವಾರಿಸಲಾಗುತ್ತದೆ. ಪ್ರತಿಯೊಂದು ಶಾಲೆಯಲ್ಲೂ ಸುಸಜ್ಜಿತ ಕಟ್ಟಡ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾದ ತರಗತಿ ಕೊಠಡಿಗಳು, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯ ಒದಗಿಸಲಾಗುತ್ತದೆ.

Join WhatsApp Group

ವಿದ್ಯಾರ್ಥಿಗಳು ಮತ್ತು ಪೋಷಕರ ಇಚ್ಛೆಗೆ ತಕ್ಕಂತೆ ಭಾಷಾ ಮಾಧ್ಯಮ ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸುತ್ತಮುತ್ತಲಿನ ಗ್ರಾಮಗಳು ಮತ್ತು ವಾರ್ಡ್‌ಗಳಿಂದ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಪ್ರತಿ ಶಾಲೆಯಲ್ಲೂ ಡಿಜಿಟಲ್ ಕಲಿಕೆಗೆ ಉತ್ತೇಜನ ನೀಡಿ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲು ಆದ್ಯತೆ ನೀಡಲಾಗಿದೆ. ಕಲೆ ಹಾಗೂ ಕ್ರೀಡಾ ಚಟುವಟಿಕೆಗಳಿಗೂ ಸಮಾನ ಮಹತ್ವ ನೀಡಲಾಗುತ್ತದೆ.

ಶೈಕ್ಷಣಿಕ ಗುಣಮಟ್ಟವನ್ನು ನಿರಂತರವಾಗಿ ಪರಿಶೀಲಿಸಲು ಪ್ರತ್ಯೇಕ ಮೇಲ್ವಿಚಾರಣಾ ಸಮಿತಿಗಳನ್ನು ರಚಿಸಲಾಗುತ್ತದೆ. ಜೊತೆಗೆ, ಭವಿಷ್ಯದ ಉದ್ಯೋಗಾವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಶಾಲಾ ಹಂತದಲ್ಲೇ ಕೌಶಲಾಧಾರಿತ ತರಬೇತಿ ನೀಡಲಾಗುತ್ತದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡ ಮುಖ್ಯಮಂತ್ರಿಯವರು, ಇತ್ತೀಚಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳ ಉತ್ತಮ ಫಲಿತಾಂಶವನ್ನು ಉಲ್ಲೇಖಿಸಿದ್ದಾರೆ.

Join WhatsApp Group

ಎಸ್‌ಎಸ್‌ಎಲ್‌ಸಿಯಲ್ಲಿ 94.1 ಶೇಕಡಾ ಹಾಗೂ ಪಿಯುನಲ್ಲಿ 86.48 ಶೇಕಡಾ ಫಲಿತಾಂಶ ದಾಖಲಾಗಿದ್ದು, ವಿಶೇಷವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ ಗಮನಾರ್ಹವಾಗಿದೆ ಎಂದು ತಿಳಿಸಿದ್ದಾರೆ.

2026–27ನೇ ಶೈಕ್ಷಣಿಕ ವರ್ಷದಿಂದ ಈ ಯೋಜನೆಗಳನ್ನು ಜಾರಿಗೆ ತರಲಾಗುವುದು. ಇದರಿಂದ 50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲೇ ಅತ್ಯುತ್ತಮ ಸರ್ಕಾರಿ ಶಾಲಾ ವ್ಯವಸ್ಥೆ ನಿರ್ಮಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದ್ದಾರೆ.ಇದನ್ನು ಓದಿ –ಒಳಮೀಸಲಾತಿ ಅನ್ವಯ ಶೀಘ್ರ 225 ವೈದ್ಯರ ನೇಮಕ: ದಿನೇಶ್ ಗುಂಡೂರಾವ್

ಪೋಷಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳಿಗೆ ಪ್ರವೇಶ ಪಡೆದು ಈ ಪರಿವರ್ತನೆಯ ಭಾಗವಾಗಬೇಕು ಎಂದು ಮುಖ್ಯಮಂತ್ರಿಯವರು ಕರೆ ನೀಡಿದ್ದಾರೆ.

  • ಹೃದಯಾಘಾತ ಶಂಕೆ: 4 ವರ್ಷದ ಬಾಲಕ ಸಾವು
    by Team Varthaman
    June 17, 2026
  • NEET ಸೋರಿಕೆ ಭೀತಿ: ಟೆಲಿಗ್ರಾಮ್‌ಗೆ ತಾತ್ಕಾಲಿಕ ಬ್ರೇಕ್‌
    by Team Varthaman
    June 16, 2026
  • ಅರ್ಹರಿಗಷ್ಟೇ ಗ್ಯಾರಂಟಿ ಸೌಲಭ್ಯ, ಯೋಜನೆಗಳು ನಿಲ್ಲುವುದಿಲ್ಲ : ಸಿಎಂ
    by Team Varthaman
    June 16, 2026
  • ಮೈಸೂರಿನ ಪಬ್‌ನಲ್ಲಿ ಅಗ್ನಿ ಅವಘಡ: ಇಬ್ಬರು ಸಜೀವ ದಹನ
    by Team Varthaman
    June 15, 2026
  • ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ
    by Team Varthaman
    June 15, 2026
ಖಾಸಗಿ ಹೆಲಿಕಾಪ್ಟರ್ ಪತನ: ಐವರು ದುರ್ಮರಣ, ಇಬ್ಬರು ಗಾಯಾಳು
ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲರ ಜಾಮೀನು ರದ್ದು
ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪ – ಸಾವಿನ ಸಂಖ್ಯೆ 3,000ಕ್ಕೆ ಏರಿಕೆ
ರಾಜ್ಯೋತ್ಸವ ಪ್ರಶಸ್ತಿ 2025–26 ಪ್ರಕಟ: 70 ಸಾಧಕರ ಆಯ್ಕೆ
ರಂಗಭೂಮಿ ಹಾಗೂ ಚಲನಚಿತ್ರ ನಟ ದಿನೇಶ್ ಮಂಗಳೂರು ನಿಧನ
TAGGED:8 ಗ್ಯಾರಂಟಿbreakingnewsGovernment SchoolKarnataka Govtlatestnewsಸರ್ಕಾರಿ ಶಾಲೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnataka

ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ

Team Varthaman
Team Varthaman
October 10, 2025
ಶೀಘ್ರದಲ್ಲೇ ಸಿಎಂ-ಡಿಸಿಎಂ ನಿಯೋಗದೊಂದಿಗೆ ರಾಷ್ಟ್ರಪತಿ ಭೇಟಿ: ತಂಗಡಗಿ
ಐಪಿಎಲ್ ಬೆಟ್ಟಿಂಗ್ ದಂಧೆ ಎಂಬ ಚಕ್ರವ್ಯೂಹ | IPL Betting
ರಾಜ್ಯದಲ್ಲಿ ಭಾರಿ ಮಳೆ : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮಳೆ ಮತ್ತಷ್ಟು ತೀವ್ರ – ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?