ಬೆಂಗಳೂರು: ಕನ್ನಡಿಗರ ಮೇಲೆ ಎಂಇಎಸ್ ದರ್ಪ, ದೌರ್ಜನ್ಯ ಖಂಡಿಸಿ ಕನ್ನಡ ನಾಡು, ನೆಲ, ಜಲ, ಭಾಷೆ ರಕ್ಷಣೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್ ಹೋರಾಟ ತೀವ್ರಗೊಂಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಟೌನ್ ಹಾಲ್ ಮುಂಭಾಗದಿಂದ ನಡೆಯಬೇಕಿದ್ದ ಪ್ರತಿಭಟನಾ ರ್ಯಾಲಿಗೆ ಪೊಲೀಸರು ತಡೆಯೊಡ್ಡಿದ್ದಾರೆ. ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ: ಅಕ್ರಮ ತಡೆಯಲು ವೆಬ್ ಸ್ಟ್ರೀಮಿಂಗ್ ವ್ಯವಸ್ಥೆ
ಮೆರವಣಿಗೆ ಆರಂಭಕ್ಕೂ ಮುನ್ನವೇ ಪೊಲೀಸರು ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಅವರನ್ನು ವಶಕ್ಕೆ ಪಡೆದಿದ್ದಾರೆ. ವಾಟಾಳ್ ನಾಗರಾಜ್ ಸೇರಿದಂತೆ ಹಲವು ನಾಯಕರು ಟೌನ್ ಹಾಲ್ ಬಳಿ ತಮ್ಮ ವಾಹನದಲ್ಲಿ ಆಗಮಿಸುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ವಾಟಾಳ್ ನಾಗರಾಜ್ ಕಾರಿನಿಂದ ಇಳಿಯುತ್ತಿದ್ದಂತೆಯೇ ವಶಕ್ಕೆ ಪಡೆದರು. ಮಾತನಾಡಲು ಅವಕಾಶ ನೀಡದೇ ಬಸ್ ನಲ್ಲಿ ತುಂಬಿದ್ದಾರೆ.
ಇದೇ ವೇಳೆ ಸಾ.ರಾ.ಗೋವಿಂದು ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್, ನಮಗೆ ಯಾವ ಕಾರಣಕ್ಕೆ ವಶಕ್ಕೆ ಪಡೆಯುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದರು ಅದನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದ್ದಾರೆ. ಸರ್ಕಾರ ಪೊಲೀಸರನ್ನು ಬಳಸಿಕೊಂಡು ನಮ್ಮನ್ನು ಬಂಧಿಸುತ್ತಿದೆ. ಪೊಲೀಸರು ನಮ್ಮ ಮೇಲೆ ದರ್ಪ ಮೆರೆಯುತ್ತಿದ್ದಾರೆ ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
- ಪಹಲ್ಗಾಮ್ ಉಗ್ರರು ಚೆನ್ನೈನಿಂದ ಶ್ರೀಲಂಕಾಗೆ ಪರಾರಿ?
- ಕನ್ನಡಿಗರ ವಿರುದ್ಧ ವಿವಾದಿತ ಹೇಳಿಕೆ: ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು
- ಯೂನಿಯನ್ ಬ್ಯಾಂಕ್ನಲ್ಲಿ 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗೋವಾ ಶಿರಗಾವ್ ದೇವಸ್ಥಾನದಲ್ಲಿ ಕಾಲ್ತುಳಿತ – 6 ಭಕ್ತರು ಸಾವು, 50 ಕ್ಕೂ ಹೆಚ್ಚು ಮಂದಿಗೆ ಗಾಯ
- ಮೈಸೂರು ನಗರದ ವಿವಿಧೆಡೆ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಬೆದರಿಕೆ
- ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ – ಅಧಿಕಾರಿಗಳಲ್ಲಿ ಆತಂಕ