ಬೆಂಗಳೂರು: ರಾಜ್ಯದಲ್ಲಿ ನಿಯಮಿತ ಅನುಮತಿಯಿಲ್ಲದೇ ಕಾರ್ಯನಿರ್ವಹಿಸುತ್ತಿರುವ ಉಬರ್ ಮತ್ತು ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.
ನ್ಯಾಯಾಲಯದ ವಿಚಾರಣೆ:
ಹೈಕೋರ್ಟ್ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ನೇತೃತ್ವದ ಪೀಠದಲ್ಲಿ ಉಬರ್ ಮತ್ತು ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳ ಸಂಬಂಧ ಅರ್ಜಿ ವಿಚಾರಣೆ ನಡೆಯಿತು.ಕರ್ನಾಟಕ ಸರ್ಕಾರ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಯಾವುದೇ ನಿಯಮಾವಳಿ ರೂಪಿಸಿಲ್ಲ, ಆದ್ದರಿಂದ ನಿಯಮವಿಲ್ಲದೇ ಈ ಸೇವೆಗಳನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
Contents
ರಾಜ್ಯ ಸರ್ಕಾರಕ್ಕೆ ಸೂಚನೆ:
ಮೂರು ತಿಂಗಳಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸಂಬಂಧಿಸಿದ ನಿಯಮ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.ಅದುವರೆಗೂ ಆರು ವಾರಗಳ ಒಳಗೆ ಉಬರ್ ಮತ್ತು ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.
ಈ ತೀರ್ಪಿನಿಂದ ಉಬರ್ ಮತ್ತು ರಾಪಿಡೋಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದ ಬೈಕ್ ಟ್ಯಾಕ್ಸಿ ಸೇವೆಗಳ ಭವಿಷ್ಯ ಕುರಿತಾಗಿ ಹೈಕೋರ್ಟ್ ನಿರ್ಧಾರ ಮಹತ್ವ ಪಡೆದಿದೆ.