ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಹೊಳಲ್ಕೆರೆ ಮೂಲದ ಬ್ಯಾಂಕ್ ಜನಾರ್ಧನ್ (76) ನಿಧನರಾದರು.
ನಿನ್ನೆ ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕ್ಷತ್ರಿಯ ಸಮಾಜದ ಪದ್ಧತಿಯಂತೆ ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಿತು
ಕೆಲ ತಿಂಗಳ ಹಿಂದಷ್ಟೇ ಬ್ಯಾಂಕ್ ಜನಾರ್ಧನ ಅವರಿಗೆ ಹೃದಯಾಘಾತವಾಗಿತ್ತು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.
ಕನ್ನಡ ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಜನಾರ್ದನ್ ಮಿಂಚಿದ್ರು.
80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್ ಉಪೇಂದ್ರ ನಿರ್ದೇಶನದ ಶ್ ಸಿನಿಮಾ, ತರ್ಲೆ ನಾನ್ ಮಗ , ಬೆಳ್ಳಿಯಪ್ಪ ಬಂಗಾರಪ್ಪ , ಗಣೇಶ ಸುಬ್ರಹ್ಮಣ್ಯ, ಗೌರವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ಗಮನ ಸೆಳೆದಿದ್ದಾರೆ.
- ಪಹಲ್ಗಾಮ್ ಉಗ್ರರು ಚೆನ್ನೈನಿಂದ ಶ್ರೀಲಂಕಾಗೆ ಪರಾರಿ?
- ಕನ್ನಡಿಗರ ವಿರುದ್ಧ ವಿವಾದಿತ ಹೇಳಿಕೆ: ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು
- ಯೂನಿಯನ್ ಬ್ಯಾಂಕ್‌ನಲ್ಲಿ 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗೋವಾ ಶಿರಗಾವ್ ದೇವಸ್ಥಾನದಲ್ಲಿ ಕಾಲ್ತುಳಿತ – 6 ಭಕ್ತರು ಸಾವು, 50 ಕ್ಕೂ ಹೆಚ್ಚು ಮಂದಿಗೆ ಗಾಯ
- ಮೈಸೂರು ನಗರದ ವಿವಿಧೆಡೆ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಬೆದರಿಕೆ