ಮೈಸೂರು: ಜಾತಿ ಗಣತಿ ಸಂಖ್ಯೆ ಹೊರ ಹಾಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷ ಹಾಗೂ ಪ್ರತಿಪಕ್ಷ ಇಬ್ಬರನ್ನೂ ಕುರಿ ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪಸಿಂಹ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ವಾಸ್ತವ ವಿಚಾರಗಳನ್ನು ಮರೆಮಾಚಲು ಸಿದ್ದರಾಮಯ್ಯ ಜಾತಿ ಗಣತಿ ಮುನ್ನೆಲೆಗೆ ಬಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಡೆಯುತ್ತಿರುವುದು ಯಾವುದೇ ಒಂದು ಜಾತಿ ಅಲ್ಲ. ಒಟ್ಟಾರೆ ಹಿಂದೂ ಧರ್ಮವನ್ನು ಒಡೆಯುವುದಕ್ಕೆ ಹೊರಟಿದ್ದಾರೆ.
ಹಿಂದೂಗಳಲ್ಲಿನ ಜಾತಿಗಳನ್ನು ಸಿಎಂ ಸಿದ್ದರಾಮಯ್ಯ ಒಡೆದಿದ್ದಾರೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಆಗ ಅಹಿಂದ ಅಂತ ಒಂದು ವರ್ಗ ಒಡೆದರು. ಈಗ ಜಾತಿ ಗಣತಿ ಹೆಸರಲ್ಲಿ ಇಡೀ ಹಿಂದೂ ಧರ್ಮ ಒಡೆಯುತ್ತಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಮಾಡುತ್ತಿರುವ ನಾಟಕ ಇದು ಎಂದು ಅವರು ಖಂಡಿಸಿದರು.ಇದನ್ನು ಓದಿ –ಮೈಸೂರಲ್ಲಿ ಲಾರಿ ಸಂಚಾರ ಬಂದ್
ಕಾಂಗ್ರೆಸ್ ನಲ್ಲಿ 35 ಜನ ವೀರಶೈವ ಶಾಸಕರಿದ್ದಾರೆ. ಸಿದ್ದರಾಮಯ್ಯ ಅವರಿಗೆ ತಮ್ಮ ಕುರ್ಚಿ ಬಿಟ್ಟು ಕೊಡುತ್ತಾರಾ? ಲಿಂಗಾಯತರು, ಒಕ್ಕಲಿಗರು, ಒಬಿಸಿ ಎಲ್ಲದರಲ್ಲೂ ಉಪ ಜಾತಿ ಲೆಕ್ಕ ಹಾಕಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್ ಅವರಲ್ಲಿ ಉಪ ಜಾತಿ ಏಕೆ ಲೆಕ್ಕ ಹಾಕಿಲ್ಲ? ಎಂದು ಅವರು ಪ್ರಶ್ನಿಸಿದರು.