By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಉದ್ಯೋಗ ಮಾರುಕಟ್ಟೆಯಲ್ಲೀಗ ಹೆಚ್ಚಿದ ಸ್ಪರ್ಧೆ: ಡಾ.ಎಂ.ಬಿ.ಬೋರಲಿಂಗಯ್ಯ   
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಉದ್ಯೋಗ ಮಾರುಕಟ್ಟೆಯಲ್ಲೀಗ ಹೆಚ್ಚಿದ ಸ್ಪರ್ಧೆ: ಡಾ.ಎಂ.ಬಿ.ಬೋರಲಿಂಗಯ್ಯ   
KarnatakaMysoreTrending

ಉದ್ಯೋಗ ಮಾರುಕಟ್ಟೆಯಲ್ಲೀಗ ಹೆಚ್ಚಿದ ಸ್ಪರ್ಧೆ: ಡಾ.ಎಂ.ಬಿ.ಬೋರಲಿಂಗಯ್ಯ   

Team Varthaman
Last updated: April 17, 2025 1:01 PM
Team Varthaman
Published: April 17, 2025
Share
SHARE

ಮೈಸೂರು : ಉದ್ಯೋಗ ಮಾರುಕಟ್ಟೆಯಲ್ಲೀಗ ಸ್ಪರ್ಧೆ ಹೆಚ್ಚಿದೆ. ಸಾವಿರ ಹುದ್ದೇಗಳಿಗೆ ಲಕ್ಷ ಸಂಖ್ಯೆಯಲ್ಲಿ  ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದಾರೆ. ಕಠಿಣ ಪರಿಶ್ರಮವಿದ್ದರೆ ಇಂತಹ ಉದ್ಯೋಗಗಳನ್ನು ನೀವು ಪಡೆಯಬಹುದು ಎಂದು ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ.ಎಂ.ಬಿ.ಬೋರಲಿಂಗಯ್ಯ ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ  ಗುರುವಾರ ನಡೆದ ಐಎಎಸ್‌ ಹಾಗೂ ಕೆಎಎಸ್ ಪರೀಕ್ಷಾ ತರಬೇತಿಯ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯಾವುದೇ ಜಾಬ್ ನೋಟಿಫಿಕೇಷನ್ ಪ್ರಕಟವಾಗಲಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಕಠಿಣ ತಯಾರಿ ನಡೆಸಬೇಕು. ಸರ್ಕಾರಿ ನೌಕರಿಪಡೆಯುವ ಮೂಲ ಗುರಿ ಹೊಂದಿರಬೇಕು ಎಂದು ಕಿವಿಮಾತು ಹೇಳಿದರು. 

Join WhatsApp Group

ನಾನು ಕೂಡ ಹಳ್ಳಿಯಲ್ಲಿಯೇ ಹುಟ್ಟಿ ಬೆಳೆದು  ಮೈಸೂರು ಮೆಡಿಕಲ್ ಕಾಲೇಜಿನಲ್ಲಿ‌ ಓದಿ ಯುಪಿಎಸ್ಸಿ ಪರೀಕ್ಷೆ ತಯಾರಿಗೆ ದೆಹಲಿಗೆ ಹೋಗಿದ್ದೆ. ಇಲ್ಲಿ ಬಹುತೇಕರು ಗ್ರಾಮೀಣ ಭಾಗದವರೇ ಇದ್ದೀರಿ. ಶ್ರಮ ಪಟ್ಟು ಓದಿ. ಪ್ರಸ್ತುತ ಪರೀಕ್ಷೆ ತಯಾರಿಗೆ ದೆಹಲಿಗೆ ಹೋಗಬೇಕೆಂದಿಲ್ಲ. ಬೆಂಗಳೂರಿನಲ್ಲಿ ಅತ್ಯುತ್ತಮ ತರಬೇತಿ ಕೇಂದ್ರಗಳಿವೆ. ಮೈಸೂರಿನ ಕೆಎಸ್ಒಯು ನಡೆಸುತ್ತಿರುವ ತರಬೇತಿಯು ಅತ್ಯುತ್ತಮವಾಗಿದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.

ಹಾರ್ಡ್ ವರ್ಕ್ ಮತ್ತು ಪರಿಶ್ರಮದ ಜೊತೆಗೆ ಓದಿನಲ್ಲಿ ತಯಾರಿ ಇರಲಿ. ನಿದ್ರೆಯು ಮುಖ್ಯ. ನಿದ್ದೆಗೆಟ್ಟಿ ಓದುವುದು ಬೇಡ. ಎಲ್ಲದಕ್ಕೂ ಸಮಯ ಪಾಲನೆ ಇದ್ದರೆ ಒಳಿತು. ತಯಾರಿ ಸಮಯದಲ್ಲಿ ವಿದ್ಯಾರ್ಥಿಗಳು ಗುಂಪು ರಚಿಸಿಕೊಂಡು ಆಯ್ಕೆವಾರು ವಿಷಯಗಳನ್ನು ಚರ್ಚಿಸಿ. ಸಾಧ್ಯವಾದಷ್ಟು ಸಾಮಾಜಿಕ ಜಾಲತಾಣದ ಗೀಳಿನಿಂದ‌‌ ದೂರವಿದ್ದು,  ದೈನಂದಿನ ದೈಹಿಕ ಚಟುವಟಿಕೆ ಕಡೆಗೆ ಗಮನ ಹರಿಸಿ ಎಂದರು.

ಪರೀಕ್ಷೆ ಸಿದ್ಧತೆ ಕುರಿತು ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತ ಜಿ.ಎಸ್ ಸೋಮಶೇಖರ್, ಪರೀಕ್ಷೆ ಎದುರಿಸುವುದಕ್ಕೆ ದೃಢ ಮನಸ್ಸು ಇರಬೇಕು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಪರೀಕ್ಷೆ ಯಶಸ್ಸಿನ ತಂತ್ರಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಅವರು, ಆತ್ಮವಿಶ್ವಾಸ, ಸಮಯ ಪಾಲನೆ, ನೆನಪಿನ ಶಕ್ತಿ, ಪರೀಕ್ಷೆ ಬರೆಯುವ ತಂತ್ರ ಕಲಿತರೆ ಗೆಲುವು ನಿಮ್ಮದೆ ಎಂದು ಹೇಳಿದರು.

ನಾವು ಸಾವಿರ ಜನರಿಗಿನ್ನ ಮುಂದೆ ಇದ್ದೀವಿ ಎನ್ನುವ ಭರವಸೆ ಇರಲಿ. ಪರೀಕ್ಷೆ ಬರೆದ ಮೊದಲ ಬಾರಿಯಲ್ಲಿ ಆಯ್ಕೆಯಾಗಬೇಕು ಎನ್ನುವ ಛಲ ಇರಲಿ ಆದರೆ ಆಗದೆ ಇದ್ದಾಗ ಛಲ ಬಿಡಬೇಕು ಮತ್ತೆ ಪ್ರಯತ್ನಿಸಿ ಎಂದರು.

ಯುಪಿಎಸ್ಸಿ ಕೆಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿದರೆ ಇನ್ನೀತರ ಬೇರೆ ಸ್ಪರ್ಧಾತ್ಮಕ ಪರೀಕ್ಷೆಗೂ ಕೂಡ ಅನುಕೂಲ ವಾಗಲಿದೆ. ದಿನದ 24 ಗಂಟೆಯನ್ನು ವಿಂಗಡಿಸಿಕೊಂಡು ಸಮಯ ಪರಿಪಾಲಿಸಿ ಎಂದು ಹೇಳಿದರು.

ಪರೀಕ್ಷೆ ಬಗ್ಗೆ ತಿಳಿವಳಿಕೆ ಇರಬೇಕು. ಪಠ್ಯಕ್ರಮ, ಪರೀಕ್ಷೆ ಮಾದರಿ, ಹಿಂದಿನ ವರ್ಷದ ಪ್ರಶ್ನೆ ಪ್ರತ್ರಿಕೆಗಳ ಅಧ್ಯಯನದ ಜೊತೆಗೆ ಪ್ರತಿನಿತ್ಯ ದಿನಪತ್ರಿಕೆ, ನಿಮ್ಮಿಷ್ಟದ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕುಲಪತಿ  ಪ್ರೊ.ಶರಣಪ್ಪ ವಿ.ಹಲಸೆ ಅವರು ಮಾತನಾಡಿ,  ವಿದ್ಯಾರ್ಥಿಗಳು ಸತತ ಪ್ರಯತ್ನ ಪಟ್ಟು ಓದಬೇಕು. ನಿಮ್ಮ ನಿರಂತರ ಪ್ರಯತ್ನದಿಂದ ಎಲ್ಲವೂ ಸಾಧ್ಯ. ಶಿಕ್ಷಣ ಉದ್ಯೋಗದ ಜೊತೆಗೆ ಶಿಸ್ತನ್ನು ಕಲಿಸುತ್ತದೆ ಎಂದು ಹೇಳಿದರು.

ಕುಲಸಚಿವ ಪ್ರೊ.ಕೆ.ಬಿ ಪ್ರವೀಣ ಅವರು ಮಾತನಾಡಿ, ವಿದ್ಯಾರ್ಥಿಗಳು ಹಾರ್ಡ್ ವರ್ಕ್ ಜೊತೆಗೆ ಸ್ಮಾರ್ಟ ವರ್ಕ್ ಮಾಡಬೇಕು..ಆಸೆ ಪಟ್ಟು ಓದಿ. ವಿವಿಯ ಆವರಣದಲ್ಲಿ ಎಲ್ಲಾ ರೀತಿಯ ಸೌಕರ್ಯಗಳಿವೆ. ಇವುಗಳನ್ನು ಉಪಯೋಗಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.ಇದನ್ನು ಓದಿ –ಕೆಳಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆ ನಡೆಸಿದ ರೈತರು , ಗ್ರಾಮಸ್ಥರು

ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ  ಹೆಚ್.ವಿಶ್ವನಾಥ್, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಉಪಸ್ಥಿತಿತರಿದ್ದರು.

  • ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    by Team Varthaman
    March 26, 2026
  • ಏ.1ರಿಂದ ನೀರಿನ ದರ ಏರಿಕೆ
    by Team Varthaman
    March 26, 2026
  • ಹಾರ್ಮುಜ್ ಜಲಸಂಧಿ ತೆರೆ :ಭಾರತಕ್ಕೆ ಇರಾನ್ ಸಡಿಲಿಕೆ
    by Team Varthaman
    March 26, 2026
  • ಹೈಕಮಾಂಡ್ ತೀರ್ಮಾನದವರೆಗೆ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ
    by Team Varthaman
    March 25, 2026
  • LPG ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆ ಇಲ್ಲ: ಕೇಂದ್ರ ಸ್ಪಷ್ಟನೆ
    by Team Varthaman
    March 25, 2026
ಇಂದೋರ್: ಭಾರತದ ಮೊದಲ ಭಿಕ್ಷುಕ ಮುಕ್ತ ನಗರವಾಗಿ ಘೋಷಣೆ
ರೈಲ್ವೆ ಇಲಾಖೆಯಲ್ಲಿ 6374 ತಂತ್ರಜ್ಞ ಹುದ್ದೆಗಳಿಗೆ ನೇಮಕಾತಿ
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕಾರ
ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದು
ಕರ್ನಾಟಕ ಬಂದ್ – ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಪೊಲೀಸ್ ವಶಕ್ಕೆ.!
TAGGED:EducationkannadanewsKSOUMysore university
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಶಿವರಾತ್ರಿ…. ಶಿವನ ಆರಾಧನೆಯ ದಿನ

Team Varthaman
Team Varthaman
February 15, 2026
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪ್ರಕರಣದಿಂದ ಕೈಬಿಡುವಂತೆ ನಟ ದರ್ಶನ್ ಅರ್ಜಿ
ಸಾವು ಬದುಕಿನ ನಡುವೆ
ರಾಜ್ಯದಲ್ಲಿ ಅಧಿಕ ತಾಪಮಾನ ಎಚ್ಚರಿಕೆ – ಬೇಸಿಗೆಯಲ್ಲಿ ಬಿಸಿಲು ತೀವ್ರ
ಅಮೆರಿಕ ಒತ್ತಡದ ನಡುವೆಯೂ ಭಾರತ–ರಷ್ಯಾ S-400 ಕ್ಷಿಪಣಿ ಒಪ್ಪಂದ ಚರ್ಚೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?