By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಕರ್ನಾಟಕದ ಹಲವೆಡೆ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಕರ್ನಾಟಕದ ಹಲವೆಡೆ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ
BengaluruKarnatakaTrendingWeather

ಕರ್ನಾಟಕದ ಹಲವೆಡೆ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ

Team Varthaman
Last updated: April 21, 2025 4:32 AM
Team Varthaman
Published: April 21, 2025
Share
SHARE

ಬೆಂಗಳೂರು: ರಾಜ್ಯದಲ್ಲಿ ಬೆಚ್ಚನೆಯ ಹವಾಮಾನದ ಮಧ್ಯೆ ಮಳೆರಾಯ ತನ್ನ ತಂಪನ್ನು ಚಿಂತಿಸುತ್ತಿದ್ದಾನೆ. ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದರೆ, ಮತ್ತಷ್ಟು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಇತ್ತ ಹವಾಮಾನ ಇಲಾಖೆ ಮುಂದಿನ ಒಂದು ವಾರ ರಾಜ್ಯದ ಹಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕೆಯನ್ನು ನೀಡಿದೆ.

ವಾಯುಭಾರ ಕುಸಿತದ ಪರಿಣಾಮವಾಗಿ ಏಪ್ರಿಲ್ 21ರಿಂದ ಏಪ್ರಿಲ್ 27ರವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಬಹುತೇಕ ಭಾಗಗಳಲ್ಲಿ ಬಿರುಗಾಳಿ, ಸಿಡಿಲು ಹಾಗೂ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Join WhatsApp Group

ಈಗಾಗಲೇ ರಾಜ್ಯದ ಹಲವೆಡೆ ಮಳೆ ಆರಂಭವಾಗಿದ್ದು, ಮುಂದಿನ ಒಂದು ವಾರ ಈ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಿಲ್ಲಾವಾರು ಮಳೆ ಮುನ್ಸೂಚನೆ:

  • ಏ.21 ರಿಂದ ಏ.23 ರವರೆಗೆ: ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ – ಈ ಜಿಲ್ಲೆಗಳ ಕೆಲವೊಂದು ಭಾಗಗಳಲ್ಲಿ ಬಲವಾದ ಮೇಲ್ಮೈ ಸುಳಿಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
  • ಏ.24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಜೊತೆಗೆ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ.
  • ಏ.25: ಉಡುಪಿ, ದಕ್ಷಿಣ ಕನ್ನಡದ ಎರಡು ಭಾಗಗಳಲ್ಲಿ, ಉತ್ತರ ಕರ್ನಾಟಕದ ಒಳನಾಡಿನ ಎರಡು ಪ್ರದೇಶಗಳಲ್ಲಿ ಮಳೆಯಾಗಬಹುದು.
  • ಏ.26: ಉಡುಪಿ, ದಕ್ಷಿಣ ಕನ್ನಡದ ಕೆಲವೊಂದು ಸ್ಥಳಗಳ ಜೊತೆಗೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.

ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದ್ದು, ಬಿರುಗಾಳಿ ಮತ್ತು ಸಿಡಿಲು ಸಂದರ್ಭಗಳಲ್ಲಿ ಹೊರಗೆ ಪ್ರಯಾಣ ಮಾಡುವುದನ್ನು ತಡೆಯುವಂತೆ ತಿಳಿಸಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ವಕ್ಪ್ ಕಾಯ್ದೆ : ಸಮಗ್ರ ವಿವರ ಸಲ್ಲಿಸಲು ಕೇಂದ್ರಕ್ಕೆ 7 ದಿನ ಗಡುವು
ಭೀಕರ ಅಗ್ನಿ ಅವಘಡ – ಓರ್ವ ಸಾವು
4.9 ಲಕ್ಷ BPL ಕಾರ್ಡ್‌ಗಳು ರದ್ದು – ದಂಡ ವಿಧಿಸಲು ಆಹಾರ ಇಲಾಖೆ ಸಜ್ಜು
ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿ ತಿಂಗಳು ನೀಡುತ್ತೇವೆ ಎಂದು ನಾವು ಹೇಳಿಲ್ಲ: ಡಿಕೆ ಶಿವಕುಮಾರ್
ಮಹದೇಶ್ವರ ಬೆಟ್ಟದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಅನುಮಾನಾಸ್ಪದ ಸಾವು
TAGGED:latestnewsRain AlertWeather Forecastಮಳೆಹವಾಮಾನ ಇಲಾಖೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrendingWeather

ರಾಜ್ಯದ 13 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್

Team Varthaman
Team Varthaman
September 9, 2025
ರಾಜ್ಯದಲ್ಲಿ ಮೂವರು IAS ಅಧಿಕಾರಿಗಳ ವರ್ಗಾವಣೆ
ಶ್ರೀರಂಗಪಟ್ಟಣ ದಸರಾ ಸೆ.25ರಿಂದ ಭವ್ಯವಾಗಿ ಆರಂಭ
ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ – ಏಳು ಮಂದಿ ಅರೆಸ್ಟ್
ಕುಸುಮಾ ಮತ್ತು ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?