-ಇಂದು ಮಧ್ಯಾಹ್ನ 12.45ಕ್ಕೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಣೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ (ಸ್ಥಳ ವಿವರಣಾ ರದ್ದುಪಡಿಕೆ) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಏಪ್ರಿಲ್ 21) ಮಧ್ಯಾಹ್ನ 12.45ಕ್ಕೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲು ಸಜ್ಜಾಗಿದೆ.
ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠ ಈ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ಪ್ರಕಟಿಸಲಿದೆ.
ಬಿ.ಎಸ್. ಯಡಿಯೂರಪ್ಪ ವಿರುದ್ಧದ ಹಲವಾರು ಡಿನೋಟಿಫಿಕೇಷನ್ ಪ್ರಕರಣಗಳನ್ನು ಒಟ್ಟುಗೂಡಿಸಿ ಸುಪ್ರೀಂಕೋರ್ಟ್ ಈ ಹಿಂದೆ ಏಪ್ರಿಲ್ 4ರಂದು ವಿಚಾರಣೆ ನಡೆಸಿತ್ತು. ವಿಚಾರಣೆ ಬಳಿಕ ತೀರ್ಪನ್ನು ಕಾಯ್ದಿರಿಸಲಾಗಿದ್ದು, ಇಂದು ಅದನ್ನು ಪ್ರಕಟಿಸಲಾಗುತ್ತದೆ.ಇದನ್ನು ಓದಿ –ಕರ್ನಾಟಕದ ಹಲವೆಡೆ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ
ರಾಜಕೀಯ ವಲಯದಲ್ಲಿ ಈ ತೀರ್ಪಿಗೆ ಮಹತ್ವ ಎಷ್ಟು ಎಂಬುದು ಈಗಾಗಲೇ ಚರ್ಚೆಗೆ ಕಾರಣವಾಗಿದ್ದು, ಎಲ್ಲರ ದೃಷ್ಟಿಯೂ ಮಧ್ಯಾಹ್ನದ ಸುಪ್ರೀಂಕೋರ್ಟ್ ತೀರ್ಪಿನತ್ತ ನೋಟ ಹರಿಸಿದೆ.