ಪಹಲ್ಗಾಮ್, ಏ.24 – ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ನಡೆದ ಭೀಕರ ಉಗ್ರ ದಾಳಿಯಲ್ಲಿ 26 ಮಂದಿ, ಅವರುಗಳಲ್ಲಿ ಕರ್ನಾಟಕದ ಮೂವರು ಸೇರಿ, ಅಮಾಯಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ದೇಶವನ್ನೇ ಆಘಾತಕ್ಕೊಳಪಡಿಸಿದೆ.
ಈ ದಾಳಿಯ ಪ್ರತೀಕಾರವಾಗಿ, ಭಾರತೀಯ ಸೇನೆ ಇಂದು ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಮನೆಗಳನ್ನು ಸಂಪೂರ್ಣವಾಗಿ ಉಡಾಯಿಸಿದೆ. ಉಗ್ರರ ಮನೆಗಳು ನಾಶವಾಗುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಸಾರ್ವಜನಿಕರ ಚರ್ಚೆಗೆ ಕಾರಣವಾಗಿದೆ.
ಇದು ಪುಲ್ವಾಮಾದ ನಂತರದ ಅತ್ಯಂತ ಭೀಕರ ದಾಳಿ ಎಂಬ ಕುಖ್ಯಾತಿ ಪಡೆದಿದ್ದು, 2019ರ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ 40 ಯೋಧರು ವೀರ ಮರಣ ಹೊಂದಿದ ಘಟನೆಗೆ ಹೋಲಿಕೆಯಾದ್ದಾಗಿದೆ.
ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ತೀಕ್ಷ್ಣ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಪ್ರಮುಖವಾಗಿ ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ನೀಡುವ ಹಿನ್ನಲೆಯಲ್ಲಿ, ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಪಾಕಿಸ್ತಾನ ಈ ಬೆಳವಣಿಗೆಗೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ಗಡಿಭಾಗದಲ್ಲಿ ಗುಂಡಿನ ದಾಳಿಗೆ ಮುಂದಾಗಿದೆ. ಆದರೆ ಭಾರತೀಯ ಸೇನೆ ತಕ್ಷಣವೇ ಪ್ರತಿಕ್ರಿಯೆ ನೀಡಿದ್ದು, ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ.
ಇದಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನದ ಷೇರು ಮಾರುಕಟ್ಟೆ ಶೇಕಡಾ 2ರಷ್ಟು ಕುಸಿದಿದೆ. ಭಾರತದ ಈ ತೀರ್ಮಾನಗಳು ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟಿಗೆ ದಾರಿ ತೋರಿಸುತ್ತಿವೆ.ಇದನ್ನು ಓದಿ –ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ವ್ಯಕ್ತಿ ಸಾವು
ಭಾರತ ಸರ್ಕಾರವು ಉಗ್ರರ ವಿರುದ್ಧ ಹೋರಾಟದಲ್ಲಿ ಹಿಂದೆ ತಗ್ಗದೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಗಡಿಭಾಗದಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಲಾಗಿದೆ.