ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿಯ ಬಳಿ ಭಯಾನಕ ಘಟನೆಯೊಂದು ಇಂದು ಬೆಳಿಗ್ಗೆ ನಡೆದಿದೆ. ಚಲಿಸುತ್ತಿದ್ದ ಖಾಸಗಿ ಬಸ್‌ಗೆ ದಿಢೀರ್ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಸಂಪೂರ್ಣವಾಗಿ ಉರಿದು ಭಸ್ಮವಾಗಿದೆ. ಭಾಗ್ಯವಶಾತ್, ಬಸ್‌ನಲ್ಲಿದ್ದ 25 ಪ್ರಯಾಣಿಕರು ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ.
ಉಡುಪಿಯಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ಇಂದು ಬೆಳಿಗ್ಗೆ 5 ಗಂಟೆ ಸಮಯದಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿತ್ತು.
ಈ ವೇಳೆ ಕದಬಹಳ್ಳಿಯ ಸಮೀಪದಲ್ಲಿ ಬಸ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಪರಿಸ್ಥಿತಿಯನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಎಚ್ಚರದಿಂದ ಕೆಲಸ ಮಾಡಿ, ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಲೆಗೇಜ್ ಸಹಿತ ಕೆಳಗೆ ಇಳಿಯುವಂತೆ ಸೂಚಿಸಿದ್ದಾನೆ. ಎಲ್ಲ ಪ್ರಯಾಣಿಕರು ಕೂಡಲೇ ಬಸ್‌ನಿಂದ ಸುರಕ್ಷಿತವಾಗಿ ಹೊರಬಂದಿದ್ದಾರೆ.ಇದನ್ನು ಓದಿ –ಎಂಕೆ ಹಾಸ್ಟೆಲ್ ಗೆ ವಕ್ಫ್ ಮಂಡಳಿ ನೋಟಿಸ್‌ಗೆ ಆಕ್ರೋಶ
ಅಂತರದಲ್ಲಿ ಬೆಂಕಿಯ ಪ್ರಮಾಣ ಹೆಚ್ಚಾಗಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿಯಿತು. ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಬಸ್‌ಗೆ ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬ ವಿಷಯ ಇನ್ನೂ ತಿಳಿದುಬಂದಿಲ್ಲ. ಈ ಘಟನೆ ಬಿಂಡಿಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.