ಬೆಂಗಳೂರು: BPL ಸೇರಿದಂತೆ ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಶುಭವಾರ್ತೆಯನ್ನ ನೀಡಿದ್ದಾರೆ. ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ರಾಗಿ ಅಥವಾ ಜೋಳವನ್ನೂ ಉಚಿತವಾಗಿ ವಿತರಿಸುವಂತೆ ತೀರ್ಮಾನಿಸಲಾಗಿದೆ.
ಪ್ರಸ್ತುತ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿ ವ್ಯಕ್ತಿಗೆ ರಾಜ್ಯ ಸರ್ಕಾರದಿಂದ 5 ಕೆಜಿ ಮತ್ತು ಕೇಂದ್ರ ಸರ್ಕಾರದಿಂದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಆದರೆ ಇದೀಗ ಆಹಾರ ಇಲಾಖೆ, ಈ ಒಟ್ಟು ಪ್ರಮಾಣದ ಪಡಿತರದಲ್ಲಿ ಸ್ವಲ್ಪ ಬದಲಾವಣೆ ತಂದು, ಭಾಗಶಃ ಅಕ್ಕಿಗೆ ಬದಲಾಗಿ ರಾಗಿ ಅಥವಾ ಜೋಳವನ್ನು ನೀಡಲು ನಿರ್ಧರಿಸಿದೆ.
ಹೆಚ್ಚು ರಾಗಿ ಸೇವಿಸುವ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರತಿಯೊಬ್ಬ ಫಲಾನುಭವಿಗೆ 3 ಕೆಜಿ ರಾಗಿ ಹಾಗೂ 2 ಕೆಜಿ ಅಕ್ಕಿ ವಿತರಿಸುವ ಯೋಜನೆ ಇದೆ. ಅದೇ ರೀತಿ ಜೋಳ ಹೆಚ್ಚಾಗಿ ಬಳಸುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 3 ಕೆಜಿ ಜೋಳ ಮತ್ತು 2 ಕೆಜಿ ಅಕ್ಕಿ ವಿತರಿಸಲು ನಿರ್ಧರಿಸಲಾಗಿದೆ.ಇದನ್ನು ಓದಿ –ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸಂಪೂರ್ಣ ನಿಷೇಧ
ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಭಾಗವಾಗಿದೆ. ಈ ತಿದ್ದುಪಡಿಯ ಮೂಲಕ ಪಡಿತರ ಚೀಟಿದಾರರಿಗೆ ತಮಗೆ ಹೊಂದಿಕೆಯಾಗುವ ಆಹಾರ ಧಾನ್ಯವನ್ನು ಪಡೆದುಕೊಳ್ಳುವ ಅವಕಾಶ ಲಭ್ಯವಾಗಲಿದೆ.