- – ಕಚೇರಿಗೆ ಅಲೆದಾಟ ಬೇಕಿಲ್ಲ
ಬೆಂಗಳೂರು: ರೈತರಿಗೆ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಪೋಡಿ ದುರಸ್ತಿ ಕಾರ್ಯಗಳನ್ನು ಆನ್‌ಲೈನ್ ಮುಖಾಂತರ ಮಾಡಿಕೊಡುವಂತೆ ಯೋಜನೆ ರೂಪಿಸಿದೆ. ರೈತರು ಕಚೇರಿಗೆ ಅಲೆಯದೇ, ಮನೆ ಬಾಗಿಲಿಗೆಲೇ ದಾಖಲೆ ತಲುಪುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲಾ ಉಸ್ತುವಾರಿ ಅಧಿಕಾರಿಗಳು ಹಾಗೂ ಸರ್ವೆ ಇಲಾಖೆಯ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ – ಪ್ರತಿ ತಿಂಗಳು ಕನಿಷ್ಠ 5 ಸಾವಿರ ಪೋಡಿ ದುರಸ್ತಿ ಮಾಡಿಕೊಡುವ ಗುರಿ ಹೊಂದಲಾಗಿದೆ. ಇದನ್ನು ಆಂದೋಲನದ ರೀತಿಯಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಪೋಡಿ ದುರಸ್ತಿಯ ಪ್ರಕ್ರಿಯೆ ಇನ್ನಷ್ಟು ಸರಳಗೊಳಿಸಲಾಗಿದ್ದು, ರೈತರು ಕಚೇರಿಗೆ ಹೋಗದೇ ಮನೆಗೇ ಅಧಿಕಾರಿಗಳು ಬಂದು 1ರಿಂದ 5 ರವರೆಗೆ ಬೇಕಾದ ದಾಖಲೆಗಳನ್ನು ಸಿದ್ಧಪಡಿಸಲಿದ್ದಾರೆ. ಈಗಾಗಲೇ 30,476 ಪ್ರಕರಣಗಳಲ್ಲಿ ಸರ್ವೆ ಇಲಾಖೆ ಭೂಮಾಪನ ಕಾರ್ಯವನ್ನು ಕೈಗೆತ್ತಿಕೊಂಡಿದೆ ಎಂದು ಅವರು ತಿಳಿಸಿದರು.ಇದನ್ನು ಓದಿ –ಮೇ ತಿಂಗಳಿಂದ BPL ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ಉಚಿತ ವಿತರಣೆ
ಇದಲ್ಲದೇ, ತಹಶೀಲ್ದಾರ್ ಕಚೇರಿಗಳಲ್ಲಿರುವ ಎ ಹಾಗೂ ಬಿ ದರ್ಜೆಯ ದಾಖಲೆಗಳನ್ನು ಭೂ ಸುರಕ್ಷಾ ಯೋಜನೆಯಡಿ ಡಿಜಿಟಲೀಕರಣ ಮಾಡಲಾಗುತ್ತಿದೆ. ಈಗಾಗಲೇ 18.28 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. ರೈತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಪ್ರಮಾಣಿತ ದಾಖಲೆಗಳನ್ನು ಸುಲಭವಾಗಿ ಪಡೆಯಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.