- ದಸರಾ ಸಮಯದಲ್ಲಿ ಪ್ರಾರಂಭಿಸಲು ಯೋಜನೆ
ಬೆಂಗಳೂರು: ಕಾವೇರಿ ನದಿಯಲ್ಲಿ ಆಯೋಜಿಸಲಾಗುತ್ತಿರುವ ಆರತಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ನೀಲನಕ್ಷೆ ಒಂದು ವಾರದೊಳಗೆ ಸಿದ್ಧವಾಗಲಿದ್ದು, ಈ ವರ್ಷ ದಸರಾ ಹಬ್ಬದ ವೇಳೆ ಕಾರ್ಯಕ್ರಮವನ್ನು ಆರಂಭಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಗಾಗಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ವಿಶೇಷ ಸಮಿತಿಯೊಂದನ್ನು ರಚಿಸಲಾಗಿದೆ. ಈ ಸಮಿತಿ ಮುಂದಿನ 8-10 ದಿನಗಳಲ್ಲಿ ಕಾರ್ಯಕ್ರಮದ ನೀಲನಕ್ಷೆ ಸಿದ್ಧಪಡಿಸಲಿದೆ.
ಸಮಿತಿಯಲ್ಲಿ ಚೆಸ್ಕಾಂ, ಪ್ರವಾಸೋದ್ಯಮ ಇಲಾಖೆ, ಮುಜರಾಯಿ ಇಲಾಖೆ, ಇಬ್ಬರು ಜಿಲ್ಲಾಧಿಕಾರಿಗಳು, ಸ್ಥಳೀಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಬಿಎಡಬ್ಲ್ಯುಎಸ್‌ಎಸ್ಬಿ ಸದಸ್ಯರು ಸೇರಿದ್ದಾರೆ. ನೀರಾವರಿ ಇಲಾಖೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಮುಂದಾಗಲಿದೆ.ಇದನ್ನು ಓದಿ –ಈಜಲು ಹೋದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು
ಕಾವೇರಿ ಆರತಿ ಕಾರ್ಯಕ್ರಮ ಜಲ ಸಂರಕ್ಷಣೆಯ ಮಹತ್ವವನ್ನು ಉತ್ತೇಜಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಗೆ ರಾಜ್ಯ ಸರ್ಕಾರವು ಈಗಾಗಲೇ ₹92 ಕೋಟಿ ಹಣ ಹಂಚಿಕೆ ಮಾಡಲು ತೀರ್ಮಾನಿಸಿದೆ. ಇತರೆ ಇಲಾಖೆಗಳ ಸಹಕಾರವೂ ಇದರಲ್ಲಿ ಇರಲಿದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.