ರಾಯಚೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಹತ್ಯೆಯಾಗಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪ್ರಮುಖ ಸ್ಥಳಗಳು ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಇದೇ ಹಿನ್ನೆಲೆ, ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಬಾಂಬ್ ಸ್ಕ್ವಾಡ್, ಶ್ವಾನ ದಳ ಮತ್ತು ಪೊಲೀಸ್ ತಂಡಗಳಿಂದ ತೀವ್ರ ಪರಿಶೀಲನೆ ನಡೆಸಲಾಗಿದೆ.
ದಿನಾಂಕದಂತೆ ಸಾವಿರಾರು ಭಕ್ತರು ಆಗಮಿಸುವ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಮಂತ್ರಾಲಯದಲ್ಲಿ, ಭದ್ರತಾ ಕ್ರಮಗಳನ್ನು ಗಟ್ಟಿಗೊಳಿಸಲಾಗಿದೆ. ಮಠದ ಆವರಣ, ಭೋಜನ ಶಾಲೆ, ತುಂಗಭದ್ರಾ ನದಿ ತೀರ, ಬಸ್ ನಿಲ್ದಾಣ, ವ್ಯಾಪಾರ ಮಳಿಗೆಗಳು, ವಸತಿಗೃಹಗಳು ಹಾಗೂ ಬಸ್ ಮತ್ತು ಇತರ ವಾಹನಗಳಲ್ಲಿ ಬರುವ ಭಕ್ತರ ಬ್ಯಾಗ್‌ಗಳಲ್ಲಿಯೂ ಪರಿಶೀಲನೆ ನಡೆಯುತ್ತಿದೆ.ಇದನ್ನು ಓದಿ –ಶೋಷಣೆಯ ಮತ್ತೊಂದು ಮುಖ
ಮಂತ್ರಾಲಯ ಮಠದ ಆಡಳಿತ ಮಂಡಳಿಗೆ ಭದ್ರತೆ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ಮಂತ್ರಾಲಯಂ ಮತ್ತು ಮಾಧವರಂ ಠಾಣೆಗಳ ಪೊಲೀಸರು 24 ಗಂಟೆಗಳಿಗಿಂತಲೂ ಹೆಚ್ಚು ಕಾಲ ಕಟ್ಟೆಚ್ಚರ ವಹಿಸುತ್ತಿದ್ದಾರೆ. ಭಕ್ತರು ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.