ಬೆಂಗಳೂರು: 2025ರ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಬೆಳಗ್ಗೆ 11:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ಮೂಲಕ ಅಧಿಕೃತವಾಗಿ ಪ್ರಕಟಣೆ ನೀಡಲಿದ್ದಾರೆ.
ಫಲಿತಾಂಶವನ್ನು ಪ್ರಕಟಿಸಿದ ನಂತರ ಮಧ್ಯಾಹ್ನ 12:30ಕ್ಕೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.
ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4ರ ವರೆಗೆ ನಡೆಯಿದ್ದು, ರಾಜ್ಯದಾದ್ಯಂತ ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯುತ್ತಾರೆ. ವಿದ್ಯಾರ್ಥಿಗಳು ತಮ್ಮ ಹಾಲ್‌ಟಿಕೆಟ್ ಸಂಖ್ಯೆಯ ಮೂಲಕ ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ www.karresults.nic.in ಗೆ ಭೇಟಿ ನೀಡಬಹುದು.