ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರೀಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ(94) ಅವರು ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು.
ಕುವೆಂಪು ಅವರ ನೆಚ್ಚಿನ ಶಿಷ್ಯರೊಳೊಗೊಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಕನ್ನಡ ಸಾರಸ್ವತ ಲೋಕ ಕಂಬನಿ ಮಿಡಿದಿದೆ.
ಅವರ ಆತ್ಮಕ್ಕೆ ಚಿರಶಾಂತಿ ಕೋರಿದೆ.