ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ ಮಾಡಿದ್ದು, ಕ್ರಿಕೆಟ್ ಲೋಕದಲ್ಲಿ ಅಚ್ಚರಿ ಮೂಡಿದೆ.
ಇತ್ತೀಚೆಗಷ್ಟೇ ಎರಡು ಐಸಿಸಿ ಟ್ರೋಫಿಗಳನ್ನು ಭಾರತಕ್ಕೆ ಗೆಲುವು ತಂದುಕೊಟ್ಟ ರೋಹಿತ್, ಈ ನಿರ್ಧಾರವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಬಹಿರಂಗಪಡಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿನಲ್ಲಿ ಅವರು ಹೀಗೆ ಬರೆದುಕೊಂಡಿದ್ದಾರೆ:
“ನಮಸ್ಕಾರ ಎಲ್ಲರಿಗೂ, ನಾನು ಇಂದು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿರುವುದನ್ನು ಹಂಚಿಕೊಳ್ಳಲು ಇಚ್ಛಿಸುತ್ತೇನೆ. ಭಾರತವನ್ನು ವೈಟ್ ಜರ್ಸಿಯಲ್ಲಿ ಪ್ರತಿನಿಧಿಸುವುದು ನನ್ನ ಜೀವನದ ಗೌರವಕರ ಕ್ಷಣವಾಗಿತ್ತು. ಇಷ್ಟು ವರ್ಷಗಳಿಂದ ನಾನು ಪಡೆದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಮುಂದುವರೆಯುವಂತೆ ಭಾರತವನ್ನು ಏಕದಿನ (ODI) ಕ್ರಿಕೆಟ್‌ನಲ್ಲಿ ಪ್ರತಿನಿಧಿಸುತ್ತೇನೆ.”ಇದನ್ನು ಓದಿ –ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಹೊಸ ಸ್ವಯಂಸೇವಾ ಟಿಕೆಟ್ ಯಂತ್ರಗಳ ವ್ಯವಸ್ಥೆ
ರೋಹಿತ್ ಶರ್ಮಾ ಅವರ ಈ ನಿರ್ಧಾರ ಅಭಿಮಾನಿಗಳು ಮತ್ತು ಕ್ರಿಕೆಟ್ ವಿಶ್ಲೇಷಕರಲ್ಲಿ ಮಿಶ್ರ ಪ್ರತಿಕ್ರಿಯೆ ಉಂಟುಮಾಡಿದೆ.