ಬೆಂಗಳೂರು: ಅಂಧತ್ವ ಮುಕ್ತ ಕರ್ನಾಟಕವನ್ನು ನಿರ್ಮಿಸುವ ಗುರಿಯನ್ನು ಹೊಂದಿರುವ ರಾಜ್ಯ ಸರ್ಕಾರ, ತನ್ನ ಮಹತ್ವಾಕಾಂಕ್ಷಿ ಯೋಜನೆ ‘ಆಶಾಕಿರಣ’ ಅನ್ನು ಇದೀಗ ರಾಜ್ಯಮಟ್ಟದಲ್ಲಿ ವಿಸ್ತರಿಸುವ ಮಹತ್ವದ ಹೆಜ್ಜೆ ಇಟ್ಟಿದೆ.
ಈ ಯೋಜನೆಯಡಿಯಲ್ಲಿ ಕಣ್ಣಿನ ಸಮಗ್ರ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣೆ ಸೇವೆಗಳನ್ನು ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಶಾಶ್ವತ ದೃಷ್ಟಿ ತಪಾಸಣೆ ಕೇಂದ್ರಗಳ ಮೂಲಕ ನೀಡಲಾಗುತ್ತದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿದೆ. ಆರಂಭದಲ್ಲಿ ಚಿಕ್ಕಬಳ್ಳಾಪುರ, ಹಾವೇರಿ, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಯಲ್ಲಿತ್ತು. ಉತ್ತಮ ಪ್ರತಿಕ್ರಿಯೆ ಲಭ್ಯವಾದ ಹಿನ್ನೆಲೆಯಲ್ಲಿ ಇದನ್ನು ಉಳಿದ ಜಿಲ್ಲೆಗಳಲ್ಲಿ ಕೂಡ ವಿಸ್ತರಿಸಲಾಗುತ್ತಿದೆ.
ಈ ಯೋಜನೆಗಾಗಿ ಸರ್ಕಾರವು ₹13.30 ಕೋಟಿ ಮೊತ್ತವನ್ನು ಮೀಸಲಿಟ್ಟಿದ್ದು, ಇದರ ಮೂಲಕ ದೃಷ್ಟಿ ದೋಷ ಹೊಂದಿರುವವರು ಉಚಿತವಾಗಿ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಮತ್ತು ಕನ್ನಡಕಗಳನ್ನು ಪಡೆಯಬಹುದಾಗಿದೆ.ಇದನ್ನು ಓದಿ –ಇಂದೋರ್: ಭಾರತದ ಮೊದಲ ಭಿಕ್ಷುಕ ಮುಕ್ತ ನಗರವಾಗಿ ಘೋಷಣೆ
‘ಆಶಾಕಿರಣ’ ಯೋಜನೆಯ ಈ ವಿಸ್ತರಣೆಯು ರಾಜ್ಯದ ಸಾವಿರಾರು ದೃಷ್ಟಿದೋಷಿತರಿಗೆ ನವ ಚೇತನವನ್ನು ನೀಡುವ ಭರವಸೆ ಹೊತ್ತಿದೆ.