ಬೆಂಗಳೂರು: ದ್ವಿತೀಯ ಪಿಯುಸಿ (PUC) ಪರೀಕ್ಷೆ–2 ರ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇಕಡಾ 31.27ರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಏಪ್ರಿಲ್ 24ರಿಂದ ಮೇ 8ರ ವರೆಗೆ ಈ ಪರೀಕ್ಷೆಗಳನ್ನು ನಡೆಸಲಾಗಿತ್ತು.
ಒಟ್ಟು 1,94,077 ವಿದ್ಯಾರ್ಥಿಗಳು ಪರೀಕ್ಷೆ ಬರೆಯగా, 60,692 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಪರೀಕ್ಷೆಯನ್ನು ವಿಶೇಷವಾಗಿ ಫಲಿತಾಂಶ ಸುಧಾರಣೆಗೆ ಅವಕಾಶ ನೀಡುವಂತೆ ಆಯೋಜಿಸಲಾಗಿತ್ತು. ಈ ಭಾಗದಲ್ಲಿ 71,964 ವಿದ್ಯಾರ್ಥಿಗಳು ಹಾಜರಾಗಿ, ಅವರಲ್ಲಿ 41,719 ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಲು ಸರ್ಕಾರದ ಅಧಿಕೃತ ವೆಬ್‌ಸೈಟ್ www.karresults.nic.in ಗೆ ಭೇಟಿ ನೀಡಬಹುದು.ಇದನ್ನು ಓದಿ -24 ಕ್ಯಾರಟ್ ಚಿನ್ನದಲ್ಲಿ ₹12,000 ಭಾರಿ ಏರಿಕೆ!
ಇದು ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶ ನೀಡಿದ ಪರೀಕ್ಷೆಯಾಗಿ, ಮುಂದಿನ ಶೈಕ್ಷಣಿಕ ಹಾದಿಯಲ್ಲಿ ಉತ್ತೇಜನದ ಕಾರಣವಾಗಲಿದೆ.