By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಮಳೆಯಿಂದ ಬೆಂಗಳೂರು ಜಲಾವೃತ: 3 ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಮಳೆಯಿಂದ ಬೆಂಗಳೂರು ಜಲಾವೃತ: 3 ಸಾವು
BengaluruKarnatakaTrendingWeather

ಮಳೆಯಿಂದ ಬೆಂಗಳೂರು ಜಲಾವೃತ: 3 ಸಾವು

Team Varthaman
Last updated: May 20, 2025 6:28 AM
Team Varthaman
Published: May 20, 2025
Share
SHARE

ಬೆಂಗಳೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಂಗಳೂರು ನಗರ ಜಲಾವೃತಗೊಂಡಿದ್ದು, ಮೂರು ಮಂದಿ ಮೃತಪಟ್ಟಿದ್ದಾರೆ. ಸಾಕಷ್ಟು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನ ಊಟ, ನೀರು, ನಿದ್ದೆ ಬಿಟ್ಟು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನಗರದ ಹಲವೆಡೆ ಮಳೆ ನೀರು ರಸ್ತೆಗಳು, ಮನೆಗಳು, ಅಪಾರ್ಟ್‌ಮೆಂಟ್‌ಗಳು ಸೇರಿದಂತೆ ಬಹುತೇಕ ಪ್ರದೇಶಗಳನ್ನು ಆವೃತ್ತ ಮಾಡಿಕೊಂಡಿದೆ. ಸುಮಾರು 500ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, 20 ಕೆರೆಗಳು ಉಕ್ಕಿ ಹರಿದ ಪರಿಣಾಮ ಬಡಾವಣೆಗಳು ಜಲಾವೃತವಾಗಿವೆ. ಮಧುವನ ಅಪಾರ್ಟ್‌ಮೆಂಟ್‌, ಡಾಲರ್ಸ್‌ ಕಾಲೋನಿ, ಬಿಟಿಎಂ ಲೇಔಟ್‌ ಸೇರಿದಂತೆ ಹಲವೆಡೆ ನೀರು ತುಂಬಿದ್ದು, ಜನರ ಹಾಳಾಗಿದೆ.

ಮಳೆಯಿಂದಾಗಿ 63 ವರ್ಷದ ಮನಮೋಹನ್ ಕಾಮತ್‌, 12 ವರ್ಷದ ದಿನೇಶ್‌ ಸೇರಿದಂತೆ ಮೂವರು ಮೃತರಾಗಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ಗೋಡೆ ಕುಸಿದು ಶಶಿಕಲಾ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಈಕೆ ಲ್ಯಾಬ್ ಸ್ಟೋನ್ ಕಂಪನಿಯಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದರಂತೆ. ಬಿಬಿಎಂಪಿ ಆಯುಕ್ತ ಮಹೇಶ್ವರ್ ರಾವ್ ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ತಗ್ಗು ಪ್ರದೇಶಗಳಲ್ಲಿ ತೀವ್ರ ಅವಾಂತರ:
ಸಾಯಿಲೇಔಟ್‌, ನಂದಗೋಕುಲ ಲೇಔಟ್‌, ಎಚ್‌ಎಸ್‌ಆರ್ ಲೇಔಟ್‌, ಕೋರಮಂಗಲ, ದೀಪಿಕಾ ಲೇಔಟ್‌, ಹೆಣ್ಣೂರು ಮುಂತಾದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದು, ಜನ ಜಲದಿಗ್ಭಂಧನದಲ್ಲಿದ್ದಾರೆ. ಟಿವಿ, ಫ್ರಿಡ್ಜ್‌, ಸೋಫಾ ಸೇರಿದಂತೆ ಅನೇಕ ಮನೆ ಉಪಕರಣಗಳು ನೀರಿನಲ್ಲಿ ಮುಳುಗಿವೆ. ಕೆಲ ಭಾರವಾದ ವಸ್ತುಗಳು ಕೂಡ ತೇಲಿ ಹೋಗುತ್ತಿರುವ ದೃಶ್ಯಗಳು ಕಂಡುಬಂದಿವೆ.

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಮೂರು ಜನರೇಟರ್‌, ಎರಡು ಬೈಕ್‌ಗಳು ಮತ್ತು ಕೆಲವು ದಾಖಲೆಗಳು ನೀರುಪಾಲಾಗಿವೆ. ಅನಾಥಾಶ್ರಮಗಳು ಕೂಡ ಜಲಾವೃತಗೊಂಡು ವೃದ್ಧರು ಮಳೆ ನೀರಿನಲ್ಲಿ ಕಾಲ ಕಳೆಯುತ್ತಿರುವ ದಯನೀಯ ಸ್ಥಿತಿ ನಿರ್ಮಾಣವಾಗಿದೆ.

ರಕ್ಷಣೆ ಮತ್ತು ನೆರವು ಕಾರ್ಯಚಟುವಟಿಕೆ:
ಬಿಬಿಎಂಪಿ ಸಿಬ್ಬಂದಿ ಬೋಟ್‌ಗಳಲ್ಲಿ ಮನೆಗೆ ನೀರು ನುಗ್ಗಿದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಅವಶ್ಯಕ ವಸ್ತುಗಳ ಪೂರೈಕೆಯೂ ನಡೆಯುತ್ತಿದೆ. ಅಲ್ಲದೆ ಕೆಲವು ಸ್ಥಳಗಳಲ್ಲಿ ಶ್ವಾನಗಳು, ಹಸುಗಳು ಸೇರಿದಂತೆ ಪ್ರಾಣಿಗಳನ್ನೂ ರಕ್ಷಿಸಲಾಗಿದೆ.ಇದನ್ನು ಓದಿ –ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಸಚಿವ ಕೆ.ಎನ್. ರಾಜಣ್ಣ

ಜನರ ಆಕ್ರೋಶ:
ಏಕದಿನದ ಮಳೆಗೆ ಬೆಂಗಳೂರು ತತ್ತರಿಸಿದ್ದು, ಸರ್ಕಾರ ಮತ್ತು ಬಿಬಿಎಂಪಿ ಈ ಕುರಿತು ಮುಂಚಿತವಾಗಿ ಕ್ರಮ ತೆಗೆದುಕೊಳ್ಳದಿರುವ ಬಗ್ಗೆ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನುಮುಂದಾದರೂ ಸರಕಾರ ಎಚ್ಚೆತ್ತುಕೊಂಡು ಮಳೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕೆಂಬುದು ಜನರ ಬೇಡಿಕೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – FIR ದಾಖಲು
ಭಾರತ ವಿರುದ್ಧ ಸುಳ್ಳು ಆರೋಪ ಮಾಡಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಮತ್ತೆ ಮುಖಭಂಗ
ಏಕಕಾಲದಲ್ಲಿ ನಾಲ್ಕು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ
ಸಿದ್ದು ಅವರು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ
KRS ಡ್ಯಾಂನಿಂದ ನೀರು ಬಿಡುಗಡೆ – ತಗ್ಗು ಪ್ರದೇಶದ ಜನರಿಗೆ ಪ್ರವಾಹ ಎಚ್ಚರಿಕೆ
TAGGED:breakingnewsheavy rainlatestnewsRain in BangloreWeather Forecast
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaLatest NewsMysore

ಈ ವರ್ಷದ ದಸರಾ ಆಚರಣೆ ಕಳವಳಕಾರಿ – ಪ್ರಮೋದಾದೇವಿ ಒಡೆಯರ್

Team Varthaman
Team Varthaman
August 28, 2025
ಗೃಹಲಕ್ಷ್ಮೀ ಯೋಜನೆ : ಜನವರಿಯಿಂದ ಬಾಕಿಯಿರುವ ಮೂರು ತಿಂಗಳ ಹಣವನ್ನು ಮೇನಲ್ಲಿ ಬಿಡುಗಡೆ
ಜ.15ರಿಂದ ನಮ್ಮ ಮೆಟ್ರೋದಲ್ಲಿ QR ಆಧಾರಿತ ಪಾಸ್‌
ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನ ಅವಧಿ ವಿಸ್ತರಣೆ
ಯುದ್ಧ ನೌಕೆಗಳ ನಿರ್ಮಾಣ ಈಗ ಭಾರತದಲ್ಲೇ: ರಾಜನಾಥ್ ಸಿಂಗ್ ಘೋಷಣೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?