ಬೆಂಗಳೂರು: ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ (ED) ತೀವ್ರ ಶಾಕ್ ನೀಡಿದ್ದು, ಅವರ ಒಡೆತನದಲ್ಲಿರುವ ಹಲವು ಶಿಕ್ಷಣ ಸಂಸ್ಥೆಗಳಿಗೆ ದಾಳಿ ನಡೆಸಿದೆ.
ತುಮಕೂರಿನಲ್ಲಿ ಇರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ಎಂಜಿನಿಯರಿಂಗ್ ಕಾಲೇಜು ಹಾಗೂ ನೆಲಮಂಗಲದ ಟಿ. ಬೇಗೂರು ಬಳಿ ಇರುವ ಮತ್ತೊಂದು ಕಾಲೇಜು ಮೇಲೆ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಾರುಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಸಂಬಂಧಿತ ಸಂಸ್ಥೆಗಳ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳುವಲ್ಲಿ ತೊಡಗಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ಆದಾಯ ತೆರಿಗೆ ಇಲಾಖೆ ಕೂಡ ಇದೇ ಶಿಕ್ಷಣ ಸಂಸ್ಥೆಗಳಲ್ಲಿ ದಾಳಿ ನಡೆಸಿದ್ದು, ಅಂದಿನ ದಾಳಿಯಲ್ಲಿ ಕೋಟ್ಯಂತರ ರೂಪಾಯಿ ಹಣ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆಯ ಸಂಬಂಧ ಪ್ರಕರಣವೂ ದಾಖಲಾಗಿತ್ತು.ಇದನ್ನು ಓದಿ –ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ
ಇದೀಗ ಇಡಿ ವತಿಯಿಂದ ನಡೆದಿರುವ ದಾಳಿಯಿಂದ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ.