ಮೈಸೂರು : ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸದಾ ಬದ್ಧನಾಗಿದ್ದೇನೆ. ಕಡಿಮೆ ಪ್ರಮಾಣ ಬೆಳೆಯುವ ರೈತರ ಮೇಲೆ ಯಾವುದೇ ದಂಡ ವಿಧಿಸದಂತೆ ತಂಬಾಕು ಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಮಂಗಳವಾರ ಈ ವಿಷಯ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ತಂಬಾಕು ಮಂಡಳಿಯ ಕಾರ್ಯಕಾರಿ ನಿರ್ದೇಶಕರ ಜೊತೆ ಮಾತನಾಡಿದ್ದು, ಪರವಾನಗಿ ಪಡೆದ ರೈತರು ಒಂದು ವೇಳೆ ಕಡಿಮೆ ಪ್ರಮಾಣದಲ್ಲಿ ಬೆಳೆದರೆ ಅಂತಹವರ ಮೇಲೆ ದಂಡ ವಿಧಿಸಬಾರದು ಎಂದು ತಿಳಿಸಲಾಗಿದೆ.
ಈ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಿ ಸೂಕ್ತ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ತಂಬಾಕು ಬೆಳೆಗಾರರ ಸಂಖ್ಯೆ ಹೆಚ್ಚಾಗಿದೆ. ಇವರ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದ ಕೂಡಲೇ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದರು.
ತಂಬಾಕು ಬೆಳೆಗಾರರ ಕಷ್ಟ-ನಷ್ಟಗಳ ಬಗ್ಗೆ ಅರಿವಿದೆ. ಕೆಲವೊಮ್ಮೆ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬೆಳೆಯುವ ಸಾಧ್ಯತೆಗಳಿರುತ್ತದೆ. ಇಂಥವರ ಮೇಲೆ ದಂಡ ವಿಧಿಸಲು ಅಧಿಕಾರಿಗಳು ಮುಂದಾಗಿದ್ದರು. ಹೆಚ್ಚುವರಿ ದಂಡ ವಿಧಿಸುವುದರಿಂದ ನಮಗೆ ತೊಂದರೆ ಆಗುತ್ತಿದೆ ಎಂದು ರೈತರು ಸಮಸ್ಯೆ ತೋಡಿಕೊಂಡರು.ಇದನ್ನು ಓದಿ – ಡಿಸಿಎಂ ಹೇಳಿಕೆ ಸತ್ಯಕ್ಕೆ ದೂರವಾದುದು: ಯದುವೀರ್ ಒಡೆಯರ್
ಕೂಡಲೇ ತಂಬಾಕು ಮಂಡಳಿ ಕಾರ್ಯಕಾರಿ ನಿರ್ದೇಶರೊಂದಿಗೆ ಚರ್ಚಿಸಿ ದಂಡ ವಿಧಿಸುವ ನಿರ್ಧಾರ ಕೈ ಬಿಡುವಂತೆ ತಿಳಿಸಿದ್ದೇನೆ ಎಂದಿದ್ದಾರೆ.