ಬೆಂಗಳೂರು: ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣದಿಂದ ಸರ್ಕಾರಕ್ಕೆ ಮುಜುಗರವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೆ.ಗೋವಿಂದರಾಜ್ ಅವರಿಗೆ ಕೋಕ್ ಕೊಡಲಾಗಿದೆ.
2023ರ ಜೂನ್ನಲ್ಲಿ ಕೆ. ಗೋವಿಂದರಾಜ್ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ರಾಜ್ಯ ಸರ್ಕಾರ ನೇಮಕ ಮಾಡಿತ್ತು. ಆದರೆ, ಈಗ ಏಕಾಏಕಿ ಅವರ ನೇಮಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಅದರಂತೆ ಕೆ. ಗೋವಿಂದರಾಜ್ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನು ಓದಿ –ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (NTET) 2025: ನೋಂದಣಿ ಪ್ರಾರಂಭ
ಪೊಲೀಸ್ ಆಯುಕ್ತ ದಯಾನಂದ್ ಅವರು ಎರಡು ಕಡೆಗಳಲ್ಲೂ ಭದ್ರತೆ ಕೊಡುವುದು ಕಷ್ಟ ಎಂದು ಹೇಳಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರ ಮೇಲೆ ಗೋವಿಂದರಾಜ್ ಒತ್ತಡ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಇಂತಹ ದುರಂತ ಸಂಭವಿಸಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಈ ಎಲ್ಲಾ ಘಟನೆಯಿಂದ ಗೋವಿಂದರಾಜ್ ಅವರಿಗೆ ನೀಡಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತೆಗೆದು ಹಾಕಲಾಗಿದೆ ಎನ್ನಲಾಗಿದೆ.