ಅಹಮದಾಬಾದ್ : ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆ ಅಹಮದಾಬಾದ್ನ ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ.
ಸುಮಾರು 242 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ಮಧ್ಯಾಹ್ನ 1:50ರ ಸುಮಾರಿಗೆ ಅಹಮದಾಬಾದ್ನ ಮೇಘಾನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ವಿಮಾನ ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್ನಿಂದ ಲಂಡನ್ಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ.
ಟೇಕಾಫ್ ಆದ 2 ಕಿ.ಮೀ ದೂರದಲ್ಲಿ ವಿಮಾನ ಪತನಗೊಂಡಿದೆ.
ಘಟನಾ ಸ್ಥಳಕ್ಕೆ 7 ಅಗ್ನಿ ಶಾಮಕ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ. ಘಟನೆಯಲ್ಲಿ ಹಲವು ಸಾವು-ನೋವು ಉಂಟಾಗಿರುವ ಶಂಕೆ ವ್ಯಕ್ತವಾಗಿದೆ.