By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಬೈಕ್‌ ಟ್ಯಾಕ್ಸಿ ಚಾಲಕರಿಗೆ ಬೆಂಗಳೂರಿಗೆ ಬೃಹತ್‌ ರ್ಯಾಲಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಬೈಕ್‌ ಟ್ಯಾಕ್ಸಿ ಚಾಲಕರಿಗೆ ಬೆಂಗಳೂರಿಗೆ ಬೃಹತ್‌ ರ್ಯಾಲಿ
KarnatakaMysoreTrending

ಬೈಕ್‌ ಟ್ಯಾಕ್ಸಿ ಚಾಲಕರಿಗೆ ಬೆಂಗಳೂರಿಗೆ ಬೃಹತ್‌ ರ್ಯಾಲಿ

Team Varthaman
Last updated: June 21, 2025 2:40 PM
Team Varthaman
Published: June 21, 2025
Share
SHARE

ಮೈಸೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದಿಂದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿದ್ದು, ನಿರುದ್ಯೋಗಿಗಳಿಗೆ ವರದಾನವಾಗಿದ್ದ ಬೈಕ್ ಟ್ಯಾಕ್ಸಿ ಸೇವೆಯನ್ನು ಮುಂದುವರಿಸಲು ಸರ್ಕಾರ ಮತ್ತು ನ್ಯಾಯಾಲಯ ಸಹಾನುಭೂತಿ ತೋರಬೇಕು ಎಂದು ಮೈಸೂರು ಜಿಲ್ಲಾ ಬೈಕ್ ಟ್ಯಾಕ್ಸಿ ಸೇವಾ ಸಂಘಟನೆಯ ಅಧ್ಯಕ್ಷರಾದ ಜಯರಾಮ್ ಹೇಳಿದರು.

ಶನಿವಾರ ಪಟ್ಟಣದ ದಂಡಿ ಮಾರಮ್ಮ ದೇವಾಲಯದ ಎದುರು ಬೈಕ್ ಟ್ಯಾಕ್ಸಿ ಚಾಲಕರ ಬೆಂಗಳೂರು ಚಲೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಮೈಸೂರು ನಗರವೊಂದರಲ್ಲೇ ಸುಮಾರು ೨ ಸಾವಿರಕ್ಕೂ ಅಧಿಕ ಊಲಾ, ಊಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಸೇವೆ ಸಲ್ಲಿಸುತ್ತಿದ್ದರು. ಇದರಿಂದ ಅವರ ಕುಟುಂಬಗಳು ಜೀವನ ನಡೆಸಲು ಸಾಧ್ಯವಾಗಿತ್ತು.

Join WhatsApp Group

ಸಾವಿರಾರು ಸಂಖ್ಯೆಯಲ್ಲಿ ವಿದ್ಯಾವಂತ ಯುವಕರು ಉದ್ಯೋಗ ಸಿಗದೆ ಈ ವೃತ್ತಿ ಮಾಡುತ್ತಾ ತಮ್ಮ ಕುಟುಂಬಕ್ಕೆ ಆಸರೆಯಾಗಿದ್ದರು. ಒಂದು ಕಡೆ ಸರ್ಕಾರಗಳು ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಲು ವಿಫಲವಾಗಿವೆ. ಮತ್ತೊಂದು ಕಡೆ ಯಾವುದೋ ಒಂದು ಕಡೆ ಉದ್ಯೋಗ ಗಿಟ್ಟಿಸಿಕೊಂಡು ಹೊಟ್ಟೆ ಹೊರೆಯುತ್ತಿದ್ದವರಿಗೆ ಬರೆ ಎಳೆಯುತ್ತಿದ್ದಾರೆ. ಇದು ಯಾವ ನ್ಯಾಯ, ಸರ್ಕಾರ ಮತ್ತು ನ್ಯಾಯಾಲಯಗಳು ಬೈಕ್ ಟ್ಯಾಕ್ಸಿ ನಿಷೇಧಕ್ಕೂ ಮುನ್ನ ಜನಾಭಿಪ್ರಾಯ ಸಂಗ್ರಹಿಸಬೇಕಿತ್ತು. ಜನರಿಗೆ ಯಾವುದು ಅನುಕೂಲವೋ ಅದನ್ನು ಪ್ರೋತ್ಸಾಹಿಸಬೇಕು. ನಾವು ಆಟೋಗಳಿಗಿಂತ ಶೇ.೫೦ ಕಡಿಮೆ ದರದಲ್ಲಿ ಗ್ರಾಹಕರಿಗೆ ಸೇವೆ ನೀಡುತ್ತಿದ್ದೇವೆ.

ಒಬ್ಬ ಆಟೋ ಚಾಲಕ ಕನಿಷ್ಠ ಒಂದು ಸಾವಿರ ರೂ. ದುಡಿಮೆ ಮಾಡಿಕೊಂಡು ತನ್ನ ಮನೆಯ ಖರ್ಚು ವೆಚ್ಚ, ಮಕ್ಕಳ ವಿದ್ಯಾಭ್ಯಾಸ ಪೋಷಕರ ಆರೋಗ್ಯ, ಮನೆ ಬಾಡಿಗೆ, ಆಹಾರ ಖರೀದಿ ಇತ್ಯಾದಿಗಳನ್ನೆಲ್ಲವನ್ನೂ ನಿಭಾಯಿಸುತ್ತಾನೆ. ದೇಶದ ಒಂಭತ್ತು ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆ ಯಾವುದೇ ಅಡ್ಡಿ ಇಲ್ಲದೆ ನಡೆಯುತ್ತಿದೆ. ನಮ್ಮ ರಾಜ್ಯದಲ್ಲಿ ಮಾತ್ರ ಇದಕ್ಕೆ ನಿಷೇಧ ಹೇರಿರುವುದು ಅನ್ಯಾಯ, ಸರ್ಕಾರಗಳು ನಮಗೆ ಪರ್ಯಾಯ ಉದ್ಯೋಗವನ್ನಾದರೂ ಕಲ್ಪಿಸಿ ಎಂದು ಆಗ್ರಹಿಸಿದರು.ಇದನ್ನು ಓದಿ –ಹನ್ನೊಂದು ದಿನಗಳ ದಸರೆ ಹೊಸದೆನಲ್ಲಾ: ಪ್ರಮೋದಾ ದೇವಿ ಒಡೆಯರ್

ನಂತರ ಬೈಕ್ ಟ್ಯಾಕ್ಸಿ ಚಾಲಕರ ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಅವರು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಂಘಟನೆಯ ಮಹದೇವು. ಕೃಷ್ಣ, ಅಯಾಸ್, ಮಹೇಶ, ನಂದಕುಮಾರ್, ಹರೀಶ್, ವಿಜಯ ಕುಮಾರ್ ಸೇರಿ ಇತರರು ಇದ್ದರು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಸಾಲುಮರದ ತಿಮ್ಮಕ್ಕ ವಿಧಿವಶ
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ
ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಒತ್ತಡ ಕಾರಣವೆಂದು ಆರೋಪ
ಹಾಲು ಉತ್ಪಾದನೆ, ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ: FSSAI ಆದೇಶ
TAGGED:bike taxibreakingnewslatestnewsMysore News
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
SportsTrending

ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ

Team Varthaman
Team Varthaman
May 12, 2025
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
ಕೃಷ್ಣ ಆದರ್ಶ ರಾಜಕಾರಣಿ: ಸಂಸದ ಮಂಜುನಾಥ್‌
ಹೇಮಾವತಿ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಳ
ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ಅತಿರೇಕ – ಕಠಿಣ ಕ್ರಮ: ಸಚಿವ ಸುಧಾಕರ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?