- – ₹3.98 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ಬೆಂಗಳೂರು: ವಂಚನೆ ಆರೋಪದ ಮೇಲೆ ಐಶ್ವರ್ಯಾ ಗೌಡ ವಿರುದ್ಧ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದ್ದು, ಅಂದಾಜು ₹3.98 ಕೋಟಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಬೆಂಗಳೂರಿನ ಇಡಿ ಅಧಿಕೃತವಾಗಿ ಎಕ್ಸ್ (ಹಳೆಯ ಟ್ವಿಟ್ಟರ್) ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಮುಟ್ಟುಗೋಲು ಹಾಕಿಕೊಳ್ಳಲಾದ ಆಸ್ತಿಗಳಲ್ಲಿ ₹2.01 ಕೋಟಿ ಮೌಲ್ಯದ ಭೂಮಿ, ₹1.97 ಕೋಟಿ ಮೌಲ್ಯದ ನಗದು ಹಾಗೂ ವಾಹನಗಳು, ಜೊತೆಗೆ ಫ್ಲಾಟ್ಗಳು ಮತ್ತು ನಿರ್ಮಿತ ಕಟ್ಟಡಗಳು ಸೇರಿವೆ ಎಂದು ತಿಳಿಸಿದೆ.
ಇದಕ್ಕೂ ಮುನ್ನ, ಐಶ್ವರ್ಯಾ ಗೌಡ ಮತ್ತು ಇತರರು ಹೆಚ್ಚಿನ ಲಾಭದ ಭರವಸೆ ನೀಡಿ ಜನರಿಂದ ಚಿನ್ನ, ನಗದು ಹಾಗೂ ಹಣವನ್ನು ಕಲೆ ಹಾಕಿ ಬ್ಯಾಂಕ್ ಖಾತೆಗಳ ಮೂಲಕ ಹಣ ವರ್ಗಾವಣೆ ನಡೆಸಿರುವುದು, ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿರುವುದು ಹಾಗೂ ಹಣದ ದುರುಪಯೋಗ ಮಾಡಿಕೊಂಡಿರುವುದಾಗಿ ಇಡಿ ತನಿಖೆಯಲ್ಲಿ ಪತ್ತೆಯಾಗಿದೆ.ಇದನ್ನು ಓದಿ –ಇರಾನ್ vs ಇಸ್ರೇಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಆತಂಕ
ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಇಡಿ ಅಧಿಕಾರಿಗಳು ಮೌಲ್ಯವಂತ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಮುಂದುವರಿದಿದೆ.