ಬೆಂಗಳೂರು:ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯ ಅಬ್ಬರದಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುತ್ತಿದ್ದು, ನದಿಗಳಲ್ಲಿ ಒಳಹರಿವು ಹೆಚ್ಚಾಗಿ ಪ್ರವಾಹ ಪರಿಸ್ಥಿತಿಯ ಭೀತಿ ಎದುರಾಗಿದೆ.
ಮಳೆ ಹೆಚ್ಚಿರುವ ಜಿಲ್ಲೆಗಳು:
- ಚಿಕ್ಕಮಗಳೂರು: ಮೂಡಿಗೆರೆ, ಎನ್ಆರ್ಪುರ, ಕಳಸ ಮತ್ತು ಶೃಂಗೇರಿ ತಾಲೂಕುಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
- ಉತ್ತರ ಕನ್ನಡ: ಹಳಿಯಾಳ, ದಾಂಡೇಲಿ, ಜೋಯಿಡಾ ಮತ್ತು ಯಲ್ಲಾಪುರ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಲಕ್ಷ್ಮೀಪ್ರಿಯಾ ಆದೇಶ ನೀಡಿದ್ದಾರೆ.
- ಹಾಸನ: ಸಕಲೇಶಪುರ, ಆಲೂರು ಮತ್ತು ಅರಕಲಗೂಡು ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಲತಾಕುಮಾರಿ ಸೂಚನೆ ನೀಡಿದ್ದಾರೆ.
- ಬೆಳಗಾವಿ: ಖಾನಾಪುರ ಸೇರಿದಂತೆ ಹಲವೆಡೆ ಬಿರುಗಾಳಿಯ ಮಳೆ ಕಾಣಿಸಿಕೊಂಡಿದ್ದು, ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ –ಆಟವಾಡುತ್ತಿದ್ದಾಗ ಹೃದಯಾಘಾತ: 9ನೇ ತರಗತಿಯ ವಿದ್ಯಾರ್ಥಿನಿ ದುರ್ಮರಣ
ಮಹಾರಾಷ್ಟ್ರದ ಪರಿಣಾಮ:
ನೆರೆ ರಾಜ್ಯ ಮಹಾರಾಷ್ಟ್ರದಲ್ಲೂ ಮಳೆ ಅಬ್ಬರದ ಪರಿಣಾಮ, ಅದರ ಪ್ರಭಾವವು ಬೆಳಗಾವಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ನಿರಂತರ ಮಳೆಯಿಂದಾದ ಭೀಕರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜನರ ಸುರಕ್ಷತೆಯ ದೃಷ್ಟಿಯಿಂದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗುತ್ತಿದೆ.