- – ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 24ಕ್ಕೆ ಏರಿಕೆ
ಹಾಸನ: ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿಯೇ ಮತ್ತೊಂದು ಮರಣ ಸಂಭವಿಸಿದ್ದು, ಜಿಲ್ಲೆಯಲ್ಲಿ ಇದುವರೆಗೆ 24 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಈಗ ಸೋಮನಹಳ್ಳಿ ಗ್ರಾಮದ 27 ವರ್ಷದ ಸಂಜಯ್ ಎಂಬ ಯುವಕನು ಈ ಬಾರಿಯ ಬಲಿಯಾಗಿದ್ದಾರೆ. ಸ್ನೇಹಿತರೊಂದಿಗೆ ಪಾರ್ಟಿ ಬಳಿಕ ತೀವ್ರ ಎದೆನೋವು ಅನುಭವಿಸಿದ ಸಂಜಯ್, ತಕ್ಷಣವೇ ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿದ್ದು, ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸಲಹೆ ನೀಡಿದ್ದರು.
ಆದರೆ ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭದಲ್ಲೇ ಆತ ಮೃತಪಟ್ಟಿದ್ದಾನೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕರು ಹೃದಯಾರೋಗದ ಭೀತಿ ಬಗ್ಗೆ ಚಿಂತೆ ವ್ಯಕ್ತಪಡಿಸುತ್ತಿದ್ದಾರೆ.ಇದನ್ನು ಓದಿ –ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ
ಒತ್ತಡಪೂರ್ಣ ಜೀವನಶೈಲಿ, ಅನಿಯಮಿತ ಆಹಾರ ಪದ್ಧತಿ ಹಾಗೂ ನಿಶ್ಚಲ ಬದುಕು ಹೃದಯಾಘಾತದ ಪ್ರಮುಖ ಕಾರಣಗಳೆಂದು ತಜ್ಞರು ಎಚ್ಚರಿಸುತ್ತಿದ್ದಾರೆ.