- – ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ 6,770 ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯವಲಯದ ಆಸ್ಪತ್ರೆಗಳಲ್ಲಿ ರೋಗಿಗಳ ಹಿತದೃಷ್ಟಿಯಿಂದ ಸ್ವಚ್ಛತೆ ಹಾಗೂ ಗುಣಮಟ್ಟದ ಸೇವೆ ಒದಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ.
Contents
ಈ ಕುರಿತು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ 2025ರ ಜನವರಿ 9ರ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನವಾಗಿದ್ದು, ಬಳಿಕ 22-05-2025ರಂದು ಸರ್ಕಾರ ಆದೇಶ ಹೊರಡಿಸಿದೆ.
ನೇಮಕಾತಿಗೆ ಅನುಮತಿಸಲಾದ ಪ್ರಮಾಣ ಮತ್ತು ಷರತ್ತುಗಳು:
- 2025-26ನೇ ಸಾಲಿಗೆ 6770 ಗ್ರೂಪ್-ಡಿ ಹುದ್ದೆಗಳ ಪೈಕಿ 80% ಹುದ್ದೆಗಳನ್ನು ಮಾತ್ರ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅನುಮತಿ.
- ಈ 80% ಹುದ್ದೆಗಳಲ್ಲೂ:
- 40% ನಾನ್-ಕ್ಲಿನಿಕಲ್ ಹುದ್ದೆಗಳನ್ನು ಸೇವಾ ಗುತ್ತಿಗೆ ಆಧಾರದಲ್ಲಿ (Service Contract)
- ಮತ್ತೊಂದು 40% ಗ್ರೂಪ್-ಡಿ ಹುದ್ದೆಗಳನ್ನು ಔಟ್‌ಸೋರ್ಸ್ ಮೂಲಕ (Outsource) ಭರ್ತಿ ಮಾಡಲಾಗುವುದು.
- ಈ ಎಲ್ಲ ನೇಮಕಾತಿಗಳು ಸರ್ಕಾರದ ಮಾರ್ಗಸೂಚಿಗಳ ಪ್ರಕಾರವೇ ನಡೆಯಬೇಕು.
ಇದನ್ನು ಓದಿ –ಹಾಸನ : ಹೃದಯಾಘಾತಕ್ಕೆ ಮತ್ತೊಂದು ಬಲಿ
ಇತರೆ ಮುಖ್ಯ ಅಂಶಗಳು:
- ಪ್ರಮಾಣಿತ ಸಿಬ್ಬಂದಿ ಮಾದರಿಯನ್ನು ಅನುಸರಿಸಿ ನೇಮಕಾತಿಗೆ ಇಲಾಖೆ ಸರ್ಕಾರದ ಅನುಮೋದನೆ ಪಡೆಯಬೇಕು.
- ಇದರಿಗಾಗಿ ಸುಮಾರು ರೂ. 50 ಕೋಟಿ ಪುನರ್ವಿನಿಯೋಗಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು.
- ಆರ್ಥಿಕ ಇಲಾಖೆಯ ಸಹಮತಿ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.