ಕೋಲಾರ: ಜಿಲ್ಲೆಯ ಮುಖ್ಯ ಆಸ್ಪತ್ರೆಯಲ್ಲಿ ಭೀತಿದಾಯಕ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡೇಟಾ ಎಂಟ್ರಿ ಆಪರೇಟರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿ ಹರೀಶ್ ಬಾಬು (33) ಎಂಬವರು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ನಾಯಕರಹಳ್ಳಿ ನಿವಾಸಿ ಎಂದು ಗುರುತಿಸಲಾಗಿದೆ. ಅವರು ಜಿಲ್ಲಾಸ್ಪತ್ರೆಯ ENT ವಿಭಾಗದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹರೀಶ್ ಬಾಬು ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಘಟನೆ ಸಂಬಂಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನು ಓದಿ –ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳ
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಯ ಹಿಂದಿನ ನಿಖರ ಕಾರಣ ಪತ್ತೆ ಹಚ್ಚುವ ತನಿಖೆ ನಡೆಯುತ್ತಿದೆ.