ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಸಂಬಂಧ ಜೆಪಿನಗರದ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಈ ದೂರಿನ ಹಿನ್ನೆಲೆಯಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 351(3) – ಅನೈತಿಕ ಹೇಳಿಕೆ, ಸೆಕ್ಷನ್ 75(3) – ಅಶ್ಲೀಲ ಹೇಳಿಕೆ ಹಾಗೂ ಸೆಕ್ಷನ್ 79 – ಮಹಿಳೆಯ ಮಾನ ಹಾನಿಗೆ ಕಾರಣವಾಗುವ ಉದ್ದೇಶದಿಂದ ಬಳಸಲಾದ ಪದಗಳಂತೆ, ರವಿಕುಮಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನು ಓದಿ –ಕಸಾಪದಲ್ಲಿ ಅವ್ಯವಹಾರ : ಅಧ್ಯಕ್ಷ ಜೋಶಿ ವಿರುದ್ದ ತನಿಖೆಗೆ ವಿಚಾರಣಾಧಿಕಾರಿ ನೇಮಕ
ಈ ಪ್ರಕರಣ ಸಾಮಾಜಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಮತ್ತೆ ಹೆಚ್ಚಿನ ಬೆಳವಣಿಗೆ ಸಾಧ್ಯತೆ ಇದೆ.