ತುಮಕೂರು: ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ (45) ಅವರು ತುಮಕೂರಿನ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ನಾಗರಾಜ್ ಅವರು ಜುಲೈ 1ರಂದು ತುಮಕೂರಿನ ದ್ವಾರಕ ಲಾಡ್ಜ್‌ನಲ್ಲಿ ರೂಮ್ ಬುಕ್ ಮಾಡಿಕೊಂಡಿದ್ದು, ನಂತರ ಆ ರೂಮಿನಿಂದ ಅವರು ಹೊರಬಂದಿರಲಿಲ್ಲ ಎಂದು ಲಾಡ್ಜ್ ಸಿಬ್ಬಂದಿ ತಿಳಿಸಿದ್ದಾರೆ. ಇಂದು ಬೆಳಗ್ಗೆ ಅವರು ಬಾಗಿಲು ತೆರೆದು ನೋಡಿದಾಗಲೇ ಆತ್ಮಹತ್ಯೆಯ ಘಟನೆ ಬೆಳಕಿಗೆ ಬಂದಿದೆ.
ಪಿಎಸ್‌ಐ ನಾಗರಾಜ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ, ಆದರೆ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.ಇದನ್ನು ಓದಿ –ದೇಶದ ಅತಿದೊಡ್ಡ ಮೆಡಿಕಲ್ ಹಗರಣ : 35 ಜನರ ವಿರುದ್ಧ FIR ದಾಖಲು
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಪ್ರಕರಣವನ್ನು ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.