ಬೆಂಗಳೂರು, ಜುಲೈ 07: ಈವರೆಗೆ ರಾಜ್ಯ ಸರ್ಕಾರ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಿದ್ದು, ಭವಿಷ್ಯದಲ್ಲಿ ಪುರುಷರಿಗೆ ಸಹ ಉಚಿತ ಬಸ್ ಪ್ರಯಾಣ ಕಲ್ಪಿಸುವ ಬಗ್ಗೆ ಯೋಚನೆ ನಡೆದಿದೆ. ಈ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆ ಯಲಬುರ್ಗಾದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಾ, “ಸದ್ಯಕ್ಕೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುತ್ತಿದೆ. ಹೆಣ್ಣು ಮಕ್ಕಳಿಗೆ ತಿಂಗಳಿಗೆ ₹2000 ನೆರವು ನೀಡಲಾಗುತ್ತಿದೆ. ಆದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ ನಂತರ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸಲು ಸರ್ಕಾರ ಚಿಂತನೆ ನಡೆಸಲಿದೆ” ಎಂದು ತಿಳಿಸಿದ್ದಾರೆ.
ತಮ್ಮ ಮಾತು ಮುಂದುವರಿಸಿದ ಅವರು, “ನಮ್ಮ ಸರಕಾರದಲ್ಲಿ ಅನುದಾನ ಕೊರತೆ ಇಲ್ಲ. ಯಾವುದೇ ಹಿನ್ನಡೆ ಇಲ್ಲದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಹೆಣ್ಣು ಮಕ್ಕಳಿಗೆ ₹2000 ನೀಡಿದಾಗ, ಕೆಲವರು ‘ನಮಗ್ಯಾಕೆ ಇಲ್ಲ?’ ಎಂದು ಪ್ರಶ್ನಿಸಿದ್ದಾರೆ. ಅಷ್ಟೆಂದು ತಮಾಷೆಯಾಗಿ ಮಾತನಾಡಿದ್ದೆ. ಆದರೆ ಸರ್ಕಾರ ಎಲ್ಲರ ಬಗ್ಗೆಯೂ ಚಿಂತನೆ ಮಾಡುತ್ತಿದೆ” ಎಂದರು.ಇದನ್ನು ಓದಿ –ಮೈಸೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಹಿರಂಗ
ಅವರು ಮುಂದಾಗಿ, “ಇನ್ನು ಮುಂದಿನ ಮೂರು ವರ್ಷ ಸಿದ್ದರಾಮಯ್ಯನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಬದಲಾವಣೆಯ ಪ್ರಶ್ನೆಯೇ ಇಲ್ಲ. ಅವರು ಹಣಕಾಸು ಸಚಿವರಾಗಿದ್ದರಿಂದ ಇನ್ನಷ್ಟು ಕಲ್ಯಾಣ ಕಾರ್ಯಕ್ರಮಗಳಿಗೆ ಗ್ಯಾರಂಟಿ ಸಿಗಲಿದೆ” ಎಂದು ತಿಳಿಸಿದರು.