ನವದೆಹಲಿ: ಇಂದು ಬೆಳಗ್ಗೆ ದೆಹಲಿ ಮತ್ತು ಸುತ್ತಮುತ್ತಲಿನ ಎನ್‌ಸಿಆರ್ (NCR) ಪ್ರದೇಶಗಳಲ್ಲಿ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಭಾರತೀಯ ಭೂಕಂಪಶಾಸ್ತ್ರ ಸಂಸ್ಥೆಯ ಮಾಹಿತಿ ಪ್ರಕಾರ, ಬೆಳಗ್ಗೆ 9:04ರ ಸುಮಾರಿಗೆ 4.4 ತೀವ್ರತೆಯ ಭೂಕಂಪನ ಸಂಭವಿಸಿದೆ.
ಈ ಭೂಕಂಪನದ ಕೇಂದ್ರ ಬಿಂದುವು ಹರಿಯಾಣದ ಜಜ್ಜರ್ ಆಗಿದ್ದು, ಇದು ದೆಹಲಿಯಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿದೆ. ಸುಮಾರು ಒಂದು ನಿಮಿಷ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯದಿಂದ ಮನೆಗಳಿಂದ ಹೊರಗೆ ಓಡಿದ್ದಾರೆ.
ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್, ಫರಿದಾಬಾದ್ ಸೇರಿದಂತೆ ಹರಿಯಾಣದ ಸೋನಿಪತ್, ರೋಹ್ಟಕ್ ಹಾಗೂ ಹಿಸಾರ್ ಪ್ರದೇಶಗಳಲ್ಲಿಯೂ ಭೂಕಂಪನದ ಅನುಭವವಾಗಿದೆ.ಇದನ್ನು ಓದಿ –ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಇಬ್ಬರ ಬಲಿ
ಹೆಚ್ಚಿನ ಹೊರೆ ಅಥವಾ ಜೀವಹಾನಿಯ ವರದಿಯಾಗಿಲ್ಲ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ನಿಖರವಾಗಿ ಮುನ್ನೋಟದಲ್ಲಿಟ್ಟುಕೊಂಡಿದ್ದಾರೆ.