ರಾಮನಗರ:ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ತಾವರೆಕೆರೆ ಬಳಿ ಹೃದಯವಿದ್ರಾವಕ ಘಟನೆ ನಡೆದಿದೆ. ಗಾಂಜಾ ಮತ್ತಿನಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನು ರಾಯಚೂರು ಮೂಲದವನೆಂದು ಗುರುತಿಸಲಾಗಿದೆ. ಪೊಲೀಸರು ಈಗಾಗಲೇ ಆತನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದು, ವಿಚಾರಣೆ ಮುಂದುವರೆದಿದೆ.
ಘಟನೆ ಸಂಭವಿಸಿದ ಸಮಯದಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಈ ವೇಳೆ ಆರೋಪಿಯೊಬ್ಬನು ಬಲವಂತವಾಗಿ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ ನಂತರ, ಸಿಲಿಂಡರ್‌ನಿಂದ ಬಾಲಕಿಯ ಮುಖಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದನು. ಹತ್ಯೆಯ ಬಳಿಕ ಆ ಸಿಲಿಂಡರ್ ಅನ್ನು ಪಕ್ಕದ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಮಾರಾಟ ಮಾಡಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.
ಕೆರಳದಿಂದ ಕೆಲಸಕ್ಕಾಗಿ ಬಾಲಕಿಯ ಕುಟುಂಬ ತಾವರೆಕೆರೆಗೆ ವಾಸಕ್ಕೆ ಬಂದಿದ್ದರು. ಬಾಲಕಿ ಸ್ಥಳೀಯ ಶಾಲೆಯ 6ನೇ ತರಗತಿಯಲ್ಲಿ ಓದುತ್ತಿದ್ದಳು. ಘಟನೆ ಸಂಭವಿಸಿದ ಸಮಯದಲ್ಲಿ ಅವಳ ತಂದೆ, ತಾಯಿ ಹಾಗೂ ಸಹೋದರ ಕೆಲಸಕ್ಕೆ ಹೋಗಿದ್ದರು.ಇದನ್ನು ಓದಿ –ಬೆಟ್ಟಿಂಗ್ ಆಪ್ ಹಗರಣ: ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ವಿರುದ್ಧ FIR ದಾಖಲೆ
ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಪ್ರಕರಣದ ಪೂರಕ ವಿವರಗಳನ್ನು ಕಲೆಹಾಕುತ್ತಿದ್ದಾರೆ. ಈ ಘಟನೆಯು ಸಮಾಜಿಕವಾಗಿ ಆಕ್ರೋಶ ಮೂಡಿಸಿದ್ದು, ದೋಷಿಗೆ ಕಠಿಣ ಶಿಕ್ಷೆ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ.