ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ಈ ಪ್ರಕರಣದಲ್ಲಿ, ಸಿಎಂ ಪತ್ನಿಗೆ 14 ಸೈಟ್‌ಗಳ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಎಂಬವರು ಸಿಬಿಐ ತನಿಖೆ ನಡೆಯಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು.
ವಿಚಾರಣೆಯ ವೇಳೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿಲ್ಲ ಎಂಬ ವಿಷಯ ಗಮನಕ್ಕೆ ಬಿದ್ದ ಹೈಕೋರ್ಟ್, ತಕ್ಷಣವೇ ನೋಟಿಸ್ ಜಾರಿಗೆ ಆದೇಶ ಹೊರಡಿಸಿದೆ. ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ನೀಡುವಂತೆ ಸೂಚಿಸಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.ಇದನ್ನು ಓದಿ –ಡಿ.ಕೆ. ಶಿವಕುಮಾರ್ ಸಿಎಂ ಆಗಲು ಸಿದ್ಧರಾಮಯ್ಯ ಬಿಡಲ್ಲ: ಶ್ರೀರಾಮುಲು
ಈ ಪ್ರಕರಣವು ರಾಜಕೀಯ ವಲಯದಲ್ಲಿಯೂ ತೀವ್ರ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳವಣಿಗೆ ಸಂಭವಿಸುವ ನಿರೀಕ್ಷೆ ಇದೆ.