ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿ, ಆರ್‌ಸಿಬಿ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ನ್ಯಾಯಮೂರ್ತಿ ಡಿ. ಕುನ್ಹಾ ನೇತೃತ್ವದ ತನಿಖಾ ಆಯೋಗವು ದುರಂತ ಕುರಿತು ಸಲ್ಲಿಸಿರುವ ವರದಿಯಲ್ಲಿ, ಪೊಲೀಸರು ನಿರ್ಲಕ್ಷ್ಯ ವಹಿಸಿದ್ದೇ ಈ ದುರಂತದ ಪ್ರಮುಖ ಕಾರಣವೆಂದು ಉಲ್ಲೇಖಿಸಲಾಗಿದೆ.
ಇದನ್ನು ಓದಿ –ದೇಶದ ಅತ್ಯಂತ ಸ್ವಚ್ಛ ನಗರ ಪಟ್ಟಿಯಲ್ಲಿ ಇಂದೋರ್ ಅಗ್ರಸ್ಥಾನ, ಮೈಸೂರು 3ನೇ ಸ್ಥಾನ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವರದಿ ಕುರಿತು ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಪೊಲೀಸರ ಅಮಾನತು ಕ್ರಮವನ್ನು ಸರಕಾರ ಸಮರ್ಥಿಸಿಕೊಂಡಿದ್ದು, ಇದರ ಜೊತೆಗೆ ಆರ್‌ಸಿಬಿ ಹಾಗೂ ಕೆಎಸ್‌ಸಿಎ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.