By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಅರಣ್ಯದಲ್ಲಿ ದನಕರು ಮೇಯಿಸುವುದು ನಿಷೇಧ :ಈಶ್ವರ ಖಂಡ್ರೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಅರಣ್ಯದಲ್ಲಿ ದನಕರು ಮೇಯಿಸುವುದು ನಿಷೇಧ :ಈಶ್ವರ ಖಂಡ್ರೆ
BengaluruKarnataka

ಅರಣ್ಯದಲ್ಲಿ ದನಕರು ಮೇಯಿಸುವುದು ನಿಷೇಧ :ಈಶ್ವರ ಖಂಡ್ರೆ

Team Varthaman
Last updated: July 22, 2025 1:09 PM
Team Varthaman
Published: July 22, 2025
Share
SHARE

ಬೆಂಗಳೂರು:ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ.

Join WhatsApp Group

ದೊಡ್ಡ ಸಂಖ್ಯೆಯ ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ.

ಅರಣ್ಯ ಸಂವರ್ಧನೆಯಾಗದಿದ್ದರೆ ಅದು ಆ ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗುತ್ತದೆ, ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು, ಪರಿಸರವಾದಿಗಳು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತ್ಯ ಕ್ರಮವಹಿಸಲು ಸೂಚಿಸಿದ್ದಾರೆ.

ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂದಾಗ, ಆಕ್ರೋಶಗೊಂಡು ಕೆಲವರು ಮೃತ ಜಾನುವಾರುಗಳಿಗೆ ವಿಷಹಾಕುವ ಕಾರಣ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇದಕ್ಕೆ ಇತ್ತೀಚೆಗೆ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದೇ ಸಾಕ್ಷಿಯಾಗಿದೆ ಎಂದೂ ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿರುತ್ತಾರೆ ಎಂದು ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.ಇದನ್ನು ಓದಿ –CCB ಭರ್ಜರಿ ಕಾರ್ಯಾಚರಣೆ – ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ

ಮಿಗಿಲಾಗಿ ಮದ್ರಾಸ್ ಹೈಕೋರ್ಟ್ “ತಮಿಳುನಾಡಿನ ಅರಣ್ಯದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ನೀಡಿದ ತೀರ್ಪಿನ ಬಳಿಕ, ನೆರೆಯ ರಾಜ್ಯದಿಂದಲೂ ನಮ್ಮ ರಾಜ್ಯಕ್ಕೆ ದನಕರುಗಳನ್ನು ತಂದು ಕಾಡಿನಲ್ಲಿ ಮೇಯಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯದ ಅರಣ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿರ್ಬಂಧಿಸಲು ಮತ್ತು ನಿಷೇಧಿಸಲು ನಿಯಮಾನುಸಾರ ಕ್ರಮವಹಿಸಲು ಸೂಚಿಸಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ಜೂನ್ 12ರವರೆಗೆ ಭಾರೀ ಮಳೆಯ ಮುನ್ಸೂಚನೆ
BMTC ಬಸ್ ಅಪಘಾತ: ಇಬ್ಬರು ದುರ್ಮರಣ, ಚಾಲಕ-ನಿರ್ವಾಹಕ ಪರಾರಿ
ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆಗೆ ಶರಣು
ಬೆಟ್ಟಿಂಗ್ ಆಪ್ ಹಗರಣ: ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ವಿರುದ್ಧ FIR ದಾಖಲೆ
ಹೊಸೂರು ರಸ್ತೆಯ ಟೋಲ್ ದರ ಏರಿಕೆ
TAGGED:Cattle grazingEshwar KhandreforestKarnataka Govtlatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnatakaTrending

ವಂಚನೆ ಪ್ರಕರಣ: ಐಶ್ವರ್ಯಾ ಗೌಡಗೆ ಇಡಿಯಿಂದ ಬಿಗ್ ಶಾಕ್

Team Varthaman
Team Varthaman
June 23, 2025
ಮನರಂಜನೆ ನೀಡಿರುವ ದಾಸರ ಪದಗಳು
ಮಧ್ಯರಾತ್ರಿ DCM ಆದೇಶದ ನಂತರ ಬಿಗ್‌ ಬಾಸ್‌ ಮನೆ ತೆರೆ
ಕರ್ನಾಟಕ ಯುಜಿಸಿಇಟಿ 2025 ಫಲಿತಾಂಶ ಪ್ರಕಟ
ನಾಗರ ಚೌತಿ ಮತ್ತು ಪಂಚಮಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?