By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ದಸರಾ-2025 ಗಜಪಯಣಕ್ಕೆ ಚಾಲನೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ದಸರಾ-2025 ಗಜಪಯಣಕ್ಕೆ ಚಾಲನೆ
KarnatakaMain NewsMysore

ದಸರಾ-2025 ಗಜಪಯಣಕ್ಕೆ ಚಾಲನೆ

Team Varthaman
Last updated: August 4, 2025 12:55 PM
Team Varthaman
Published: August 4, 2025
Share
SHARE
  • ಪೂಜೆಯ ಬಳಿಕ ನಾಡಿನತ್ತ ಮೊದಲ ತಂಡದ ಗಜಪಯಣ
  • ಆನೆ ಕಂದಕ, ಸೌರಬೇಲಿಗಳ ಸಮರ್ಪಕ ನಿರ್ವಹಣೆಗೆ ಖಂಡ್ರೆ ಸೂಚನೆ
  • ಆನೆ, ಹುಲಿಗಳ ಸಾವಿಗೆ ಕಂಬನಿ:ವನ್ಯಜೀವಿಗಳ ಸಂರಕ್ಷಣೆಗೆ ಈಶ್ವರ ಖಂಡ್ರೆ ಮನವಿ

ಮೈಸೂರು ಆ.4: ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಕೃತಿ ಪರಿಸರದ ಸಮತೋಲನಕ್ಕೆ ವನ್ಯಜೀವಿಗಳು ಅತ್ಯವಶ್ಯಕವಾಗಿದ್ದು, ಅವುಗಳ ರಕ್ಷಣೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು ಎಂದರು.

Join WhatsApp Group

ತಂತಿ ಬೇಲಿಗಳಿಗೆ ಅಕ್ರಮವಾಗಿ ಪ್ರವಹಿಸಿದ ವಿದ್ಯುತ್ ಸ್ಪರ್ಶದಿಂದ ಆನೆಗಳು ಮೃತಪಡುತ್ತಿದ್ದರೆ, ಉರುಳಿಗೆ ಚಿರತೆಗಳು ಸಿಲುಕಿ ನರಳಾಡಿ ಸಾಯುತ್ತಿವೆ. ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ವಿಷ ಪ್ರಾಶನದಿಂದ ಮೃತಪಟ್ಟಿವೆ. ಈ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ವನ್ಯಜೀವಿಗಳ ಜಾಗವನ್ನು ಆಕ್ರಮಿಸಿರುವ ನಾವು ಅವುಗಳನ್ನು ನಿರ್ದಯವಾಗಿ ಕೊಲ್ಲದೆ, ಅವುಗಳ ಸಂರಕ್ಷಣೆಗೆ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಹೊರ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರುಗಳನ್ನು ತಂದು ನಮ್ಮ ರಾಜ್ಯದ ಅರಣ್ಯ ಪ್ರದೇಶದಲ್ಲಿ ಮೇಯಿಸುತ್ತಿರುವುದರಿಂದ ವನ್ಯಜೀವಿಗಳಿಗೆ ಕಾಡಿನಲ್ಲಿ ಆಹಾರ ಲಭಿಸದಂತಾಗಿದೆ. ಹೀಗಾಗಿ ಹೊರರಾಜ್ಯದಿಂದ ತಂದು ದನಕರು ಮೇಯಿಸುವುದನ್ನು ಮಾತ್ರವೇ ನಿಷೇಧಿಸಲು ಕ್ರಮವಹಿಸಲಾಗಿದೆ ಎಂದರು.

ಆನೆ ಸೇರಿದಂತೆ ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮ ಕೈಗೊಂಡಿದೆ. ಸೌರ ತಂತಿಬೇಲಿ, ಟೆಂಟಕಲ್ ಫೆನ್ಸಿಂಗ್, ಆನೆ ಕಂದಕಗಳ ಸಮರ್ಪಕ ನಿರ್ವಹಣೆ ಮಾಡಲು ನಾನು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ನಾನು ಅರಣ್ಯ ಸಚಿವನಾಗುವ ಮೊದಲು ಅಂದರೆ 2023ರ ಜೂನ್ ವರೆಗೆ ರಾಜ್ಯದಲ್ಲಿ 312.918 ಕಿ.ಮೀ ಮಾತ್ರ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ನಾನು ಸಚಿವನಾದ ಬಳಿಕ ಕಳೆದ 2 ವರ್ಷದಲ್ಲಿ 115.085 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಇನ್ನೂ 193 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಅನುಮೋದನೆ ನೀಡಲಾಗಿದೆ. ಮುಂದಿನ ಒಂದೆರೆಡು ವರ್ಷದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಉಳಿದ ಕಡೆಯೂ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುವುದು ಎಂದರು.

ಪ್ರಕೃತಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದ ಅವರು ಅರಣ್ಯವನ್ನು ರಕ್ಷಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಆದಿವಾಸಿಗಳಿಗೆ, ಅರಣ್ಯವಾಸಿಗಳ ಸಮಸ್ಯೆಗೆ ಸ್ಪಂದಿಸಲಾಗುವುದು. ಜಂಟಿ ಸಮೀಕ್ಷೆ ನಡೆಸಿ 2015ಕ್ಕೆ ಮೊದಲು ಪಟ್ಟಾ ಜಮೀನೂ ಸೇರಿ 3 ಎಕರೆಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಉಳಿಮೆ ಮಾಡುತ್ತಿರುವ ಹಾಗೂ ಮನೆ ನಿರ್ಮಿಸಿಕೊಂಡಿರುವವರಿಗೆ ತೊಂದರೆ ನೀಡದಂತೆ ಸೂಚಿಸಲಾಗಿದೆ ಎಂದರು.

ನವರಾತ್ರಿ ಮತ್ತು ದಸರಾ ಮಹೋತ್ಸವ ಕೆಡುಕಿನ ಮೇಲೆ ಒಳಿತಿನ ದಿಗ್ವಿಜಯದ ವಿಜಯೋತ್ಸವವಾಗಿದ್ದು, ನಾವು ಎಲ್ಲ ದುಶ್ಚಟ, ದುರ್ಗಣಗಳ ವಿರುದ್ಧ ವಿಜಯೋತ್ಸವ ಆಚರಿಸೋಣ. ನಾಡದೇವಿ ಚಾಮುಂಡೇಶ್ವರಿ ಎಲ್ಲರಿಗೂ ಶುಭ ತರಲಿ ಎಂದರು.

ಅರ್ಜುನ ಪ್ರಶಸ್ತಿ ಪ್ರದಾನ:
ಆನೆ ಸೆರೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು ಮತ್ತು ಯಶಸ್ವಿಯಾಗಿ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಉತ್ತಮ ಕಾರ್ಯ ಮಾಡಿದ ಮಾವುತರು, ಕಾವಾಡಿ ಹಾಗೂ ಅರಣ್ಯ ಸಿಬ್ಬಂದಿಗೆ ಇನ್ನು ಮುಂದೆ ಅರ್ಜುನ ಆನೆ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದ ಈಶ್ವರ ಖಂಡ್ರೆ, ಮೊದಲ ಸಾಲಿನ ಪ್ರಶಸ್ತಿಯನ್ನು ಭೀಮ ಆನೆಯ ಮಾವುತ ಹಾಗೂ ಕಾವಾಡಿಗಳಾದ ಗುಂಡ ಮತ್ತು ನಂಜುಂಡಸ್ವಾಮಿಯವರಿಗೆ ಪ್ರದಾನ ಮಾಡಿದರು. ಈ ಪ್ರಶಸ್ತಿ ತಲಾ 10000 ರೂ. ಗೌರವಧನ ಹಾಗೂ ಪ್ರಶಂಸಾ ಪತ್ರ ಒಳಗೊಂಡಿರುತ್ತದೆ ಎಂದು ಅವರು ಪ್ರಕಟಿಸಿದರು. ಸಮಿತಿ ಒಂದನ್ನು ರಚಿಸಿ ಅರ್ಹ ಸಾಧಕರನ್ನ ಈ ಪ್ರಶಸ್ತಿಗೆ ಪ್ರತಿವರ್ಷ ಆಯ್ಕೆ ಮಾಡಲಾಗುವುದು, ಗಜ ಪಯಣದ ದಿನ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ಈಬಾರಿಯ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಕಿರುಪರಿಚಯದ. ಕೈಪಿಡಿ ಮತ್ತು ಪೋಸ್ಟರ್ ಬಿಡುಗಡೆ ಮಾಡಿದರು.ಇದನ್ನು ಓದಿ –ಭಾರತಕ್ಕೆ 6 ರನ್‌ಗಳ ರೋಚಕ ಗೆಲುವು

ಕಾರ್ಯಕ್ರಮದಲ್ಲಿ ರೇಷ್ಮೆ ಮತ್ತು ಪಶುಸಂಗೋಪನಾ ಖಾತೆ ಸಚಿವ ಕೆ. ವೆಂಕಟೇಶ್, ಶಾಸಕರುಗಳಾದ ಹರೀಶ್ ಗೌಡ, ತನ್ವೀರ್ ಸೇಠ್, ರವಿಶಂಕರ್, ಕಾಡಾ ಅಧ್ಯಕ್ಷರಾದ ಮರಿಗೌಡ, ಅರಣ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ಮತ್ತಿತರರು ಪಾಲ್ಗೊಂಡಿದ್ದರು.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ಸಾರಿಗೆ ನೌಕರರ ಮುಷ್ಕರ: KSRTC ಬಸ್‌ಗೆ ಕಲ್ಲು ತೂರಾಟ
ಬೆಂಗಳೂರು ಹಿಟ್ & ರನ್‌ ಅಪಘಾತದಲ್ಲಿ ವಿದ್ಯಾರ್ಥಿನಿ ಬಲಿ
ದೀಪಾವಳಿಗೆ ನಂದಿನಿ ಶುಗರ್ ಫ್ರೀ ಸಿಹಿ ತಿಂಡಿಗಳ ಬಿಡುಗಡೆ
ಮಂಡ್ಯ: ಎಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ದುರ್ಮರಣ
ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ : 9 ಮಂದಿ ಬಲಿ
TAGGED:Dasara 2025Eshwar KhandreGajapayanamysore dasaraMysore Newsಗಜಪಯಣ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrendingWeather

ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್ ಅಲರ್ಟ್ ಘೋಷಣೆ

Team Varthaman
Team Varthaman
May 26, 2025
ಪಹಲ್ಗಾಮ್ ದಾಳಿಗೆ ಪ್ರತೀಕಾರ: ಪಾಕಿಸ್ತಾನ 9 ಭಯೋತ್ಪಾದಕ ಶಿಬಿರಗಳ ಮೇಲೆ ಮಿಶಲ್ ದಾಳಿ
ಲಾರಿಗೆ ಬಸ್ ಡಿಕ್ಕಿ – ಇಬ್ಬರ ದುರ್ಮರಣ, 15ಕ್ಕೂ ಹೆಚ್ಚು ಮಂದಿಗೆ ಗಾಯ
ಅರಮನೆ ಮೈದಾನ ಭೂಮಿಗೆ 3,400 ಕೋಟಿ ಟಿಡಿಆರ್ ನೀಡಲು ಸುಪ್ರೀಂ ಕೋರ್ಟ್ ಆದೇಶ
ಚಿತ್ರದುರ್ಗ ಅಪಘಾತ: ಬಸ್‌ಗೆ ಲಾರಿ ಡಿಕ್ಕಿ, 6 ಮಂದಿ ಸಜೀವ ದಹನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?